ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೆಲುಗು ನಟ ವಿಕ್ಟರಿ ವೆಂಕಟೇಶ್ ಅಭಿನಯದ ‘ಸೈಂಧವ’ ಚಿತ್ರ ಡಿ. 22ರಂದು ಬಿಡುಗಡೆ

Last Updated 30 ಮಾರ್ಚ್ 2023, 7:45 IST
ಅಕ್ಷರ ಗಾತ್ರ

ಹೈದರಾಬಾದ್: ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ಅಭಿನಯದ 75ನೇ ಸಿನಿಮಾ 'ಸೈಂಧವ್' ಡಿಸೆಂಬರ್‌ 22ರಂದು ಬಿಡುಗಡೆಯಾಗಲಿದೆ.

ಸೈಲೇಶ್ ಕೋಲನು ನಿರ್ದೇಶನದ 'ಸೈಂಧವ್‌' ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ದಕ್ಷಿಣ ಭಾಷೆಗಳು ಸೇರಿದಂತೆ ಹಿಂದಿಯಲ್ಲಿ ಬಿಡುಗಡೆಯಾಗಲಿದೆ.

ನಿಹಾರಿಕಾ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ವೆಂಕಟ್ ಬೋಯನಪಲ್ಲಿ ನಿರ್ಮಿಸಿರುವ 'ಸೈಂಧವ್‌' ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ ಮತ್ತು ಎಸ್.ಮಣಿಕಂದನ್ ಛಾಯಾಗ್ರಹಣವಿದೆ. ಗ್ಯಾರಿ ಬಿ.ಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದಾರೆ.

ಈ ಚಿತ್ರದ ಮೂಲಕ ಬಾಲಿವುಡ್‌ ನಟ ನವಾಜುದ್ದೀನ್ ಸಿದ್ದಿಕಿ ಅವರು ಟಾಲಿವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಪ್ರಮುಖ ನಟ– ನಟಿಯರು ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯುತ್ತಿದೆ.

ವೆಂಕಟೇಶ್ 'ಸೈಂಧವ್‌' ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿರುವ ಚಿತ್ರದ ಪೋಸ್ಟರ್ ಈ ಹಿಂದೆ ಬಿಡುಗಡೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT