ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೇವ್‌ ಪಾರ್ಟಿ ಮಾಡುತ್ತಿದ್ದ ತೆಲುಗು ಸಿನಿಮಾ ನಿರ್ಮಾಪಕ ವೆಂಕಟ್‌ ಬಂಧನ

Published 31 ಆಗಸ್ಟ್ 2023, 9:55 IST
Last Updated 31 ಆಗಸ್ಟ್ 2023, 9:55 IST
ಅಕ್ಷರ ಗಾತ್ರ

ಹೈದರಾಬಾದ್‌: ಇಲ್ಲಿನ ಐಷಾರಾಮಿ ಸರ್ವಿಸ್‌ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಎನ್​ಸಿಬಿ ಅಧಿಕಾರಿಗಳು ಹಾಗೂ ಪೊಲೀಸರು ನಿರ್ಮಾಪಕ ವೆಂಕಟ್‌ನನ್ನು ಬಂಧಿಸಿದ್ದಾರೆ.

ಬುಧವಾರ ಮಧ್ಯರಾತ್ರಿ ಮಾದಾಪುರದ ವಿಠ್ಠಲ್​ರಾವ್ ನಗರದ ವೈಷ್ಣವಿ ಅಪಾರ್ಟ್​ಮೆಂಟ್​ನಲ್ಲಿ ಈ ಘಟನೆ ನಡೆದಿದೆ. ರೇವ್ ಪಾರ್ಟಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎನ್​ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅವರ ಬಳಿ ಇದ್ದ ಕೊಕೇನ್‌ , ಎಲ್​ಎಸ್​ಡಿ ಸೇರಿ ಅಪಾರ ಪ್ರಮಾಣದ ಡ್ರಗ್ಸ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ತೆಲುಗಿನ ಸಾಕ್ಷಿ, ಈನಾಡು ಮಾಧ್ಯಮಗಳು ವರದಿ ಮಾಡಿವೆ.

ಪಾರ್ಟಿಯಲ್ಲಿದ್ದ ನಿರ್ಮಾಪಕ ವೆಂಕಟ್‌ನನ್ನು ಬಂಧಿಸಲಾಗಿದ್ದು, ಐವರು ಸೆಲೆಬ್ರಿಟಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪಾರ್ಟಿಯಲ್ಲಿ ಭಾಗಿಯಾಗಿದ್ದ ಐವರು ಸೆಲೆಬ್ರಿಟಿಗಳ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಪಾರ್ಟಿಯಲ್ಲಿ ತೊಡಗಿದ್ದ ಎಲ್ಲರ ವಿಚಾರಣೆ ನಡೆಯುತ್ತಿದ್ದು, ಪಾರ್ಟಿ ನಡೆಯುತ್ತಿದ್ದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. 

ಪಾರ್ಟಿಯಲ್ಲಿ ರಾಜಕೀಯ ಹಾಗೂ ಸಿನಿಮಾ ಸೆಲೆಬ್ರಿಟಿಗಳ ಮಕ್ಕಳು ಭಾಗಿ ಆಗಿರುವ ಶಂಕೆ ಇದೆ. ಇವರಿಗೆ ಡ್ರಗ್ಸ್ ಸರಬರಾಜು ಮಾಡಿದವರು ಯಾರು ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ರೇವ್‌ ಪಾರ್ಟಿ ಪ್ರಕರಣದಲ್ಲಿ ಸಿನಿಮಾ ನಿರ್ಮಾಪಕ ಕೆ.ಪಿ.ಚೌಧರಿಯನ್ನು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT