ಶನಿವಾರ, ಸೆಪ್ಟೆಂಬರ್ 25, 2021
22 °C

ನಟ ಅಲ್ಲು ಅರ್ಜುನ್‌ಗೆ ಕೊರೊನಾ ಸೋಂಕು

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ತೆಲುಗು ಚಿತ್ರರಂಗದ ನಾಯಕ ನಟ ಅಲ್ಲು ಅರ್ಜುನ್‌ಗೆ (38) ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿರುವುದಾಗಿ ಅವರು ಬುಧವಾರ ತಿಳಿಸಿದ್ದಾರೆ.

ಕೋವಿಡ್‌ ಪಾಸಿಟಿವ್‌ ಬಂದಿರುವ ಬಗ್ಗೆ ಅಲ್ಲು ಅರ್ಜುನ್‌ ಟ್ವೀಟಿಸಿದ್ದು, 'ನನಗೆ ಕೋವಿಡ್‌ ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಮನೆಯಲ್ಲಿಯೇ ನಾನು ಪ್ರತ್ಯೇಕ ವಾಸದಲ್ಲಿದ್ದೇನೆ ಹಾಗೂ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿದ್ದೇನೆ. ನನ್ನ ಎಲ್ಲ ಹಿತೈಷಿಗಳು ಮತ್ತು ಅಭಿಮಾನಿಗಳು ಚಿಂತಿಸುವ ಅಗತ್ಯವಿಲ್ಲ, ನಾನು ಚೆನ್ನಾಗಿದ್ದೇನೆ' ಎಂದಿದ್ದಾರೆ.

ತಮ್ಮ ಸಂಪರ್ಕಕ್ಕೆ ಬಂದಿದ್ದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ. 'ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಹಾಗೂ ನಿಮಗೆ ಅವಕಾಶ ದೊರೆತಾಗ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ..' ಎಂದು ಪ್ರಕಟಿಸಿದ್ದಾರೆ.

ಅಲ್ಲು ಅರ್ಜುನ್‌ ಅಭಿನಯದ ಆಕ್ಷನ್‌ ಥ್ರಿಲ್ಲರ್‌ 'ಪುಷ್ಪ' ಸಿನಿಮಾ ಆಗಸ್ಟ್‌ 13ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಸಿದ್ಧತೆ ನಡೆಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು