ಸೋಮವಾರ, ಅಕ್ಟೋಬರ್ 18, 2021
24 °C

ತೆಲುಗು ಚಿತ್ರ ನಿರ್ಮಾಪಕ ಬಿ. ಗೋಪಾಲ್‌ಗೆ ಸತ್ಯಜಿತ್ ರೇ ಪ್ರಶಸ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ: ತೆಲುಗಿನ ಖ್ಯಾತ ಚಿತ್ರ ನಿರ್ದೇಶಕ ಬಿ. ಗೋಪಾಲ್ (ಬೆಜವಾಡ ಗೋಪಾಲ್) ಅವರನ್ನು ಸತ್ಯಜಿತ್ ರೇ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

ಕೇರಳದ ಸತ್ಯಜಿತ್ ರೇ ಫಿಲ್ಮ್ ಸೊಸೈಟಿಯು ಸ್ಥಾಪಿಸಿರುವ ಈ ಪ್ರಶಸ್ತಿಯು ₹ 10 ಸಾವಿರ ನಗದು, ಸ್ಮರಣಿಕೆಯನ್ನು ಒಳಗೊಂಡಿದೆ.

ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿರುವ ಒಟ್ಟಾರೆ ಕೊಡುಗೆಯನ್ನು ಪರಿಗಣಿಸಿ ಗೋಪಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ತಮ್ಮ ಸುದೀರ್ಘ ವೃತ್ತಿ ಜೀವನದಲ್ಲಿ ಗೋಪಾಲ್ ಅವರು 30 ತೆಲುಗು ಹಾಗೂ ಎರಡು ಹಿಂದಿ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಅ. 13ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಮಲಯಾಳ ಚಲನಚಿತ್ರ ನಿರ್ಮಾಪಕ ಬಾಲು ಕಿರಿಯತ್, ಸಂಗೀತ ನಿರ್ದೇಶಕ ಪೆರುಂಬವೂರು ಜಿ. ರವೀಂದ್ರನಾಥ್ ಮತ್ತು ಇತರರು ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು