ಹೈದರಾಬಾದ್: ತೆಲುಗು ಚಿತ್ರರಂಗದ ಸೂಪರ್‌ಸ್ಟಾರ್ ಮಹೇಶ್ ಬಾಬು (46) ಅವರಿಗೆ ಕೋವಿಡ್–19 ದೃಢಪಟ್ಟಿದೆ.

ಎಲ್ಲ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದರೂ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ಮಹೇಶ್ ಬಾಬು ಸಾಮಾಜಿಕ ಮಾಧ್ಯಮಗಳ ಮೂಲಕ ಗುರುವಾರ ಬಹಿರಂಗ ಪಡಿಸಿದ್ದಾರೆ. ಸೋಂಕಿನ ಸಾಧಾರಣ ಲಕ್ಷಣಗಳು ಇರುವುದಾಗಿ ಪ್ರಕಟಿಸಿದ್ದಾರೆ.

ಈಗ ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದು, ಸೂಕ್ತ ವೈದ್ಯಕೀಯ ಸಲಹೆಗಳನ್ನು ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಅವರು ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಾಚರಣೆಯನ್ನು ವಿದೇಶದಲ್ಲಿ ನಡೆಸಿ ಮರಳಿದ್ದರು.

'ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ಇನ್ನೂ ಲಸಿಕೆ ಹಾಕಿಸಿಕೊಳ್ಳದವರು ಕೂಡಲೇ ಅದನ್ನು ಹಾಕಿಸಿಕೊಳ್ಳಿ, ಅದು ಸೋಂಕು ಉಲ್ಬಣಗೊಳ್ಳುವುದು ಹಾಗೂ ಆಸ್ಪತ್ರೆಗೆ ದಾಖಲಾಗುವ ಅಗತ್ಯವನ್ನು ತಪ್ಪಿಸುತ್ತದೆ. ದಯಮಾಡಿ ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಹಾಗೂ ಸುರಕ್ಷಿತವಾಗಿರಿ. ಮತ್ತೆ ಹಿಂದಿರುಗಲು ಕಾತುರನಾಗಿರುವೆ...' ಎಂದು ಮಹೇಶ್ ಬಾಬು ಪ್ರಕಟಿಸಿದ್ದಾರೆ.

ಅವರ 'ಸರ್ಕಾರು ವಾರಿ ಪಾಟ' ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಏಪ್ರಿಲ್‌ಗೆ ತೆರೆ ಕಾಣುವ ಸಾಧ್ಯತೆ ಇದೆ.

ಮಹೇಶ್ ಬಾಬು ಅವರ ಅತ್ತಿಗೆ, ನಟಿ ಶಿಲ್ಪ ಶಿರೋಡ್ಕರ್ ಅವರಿಗೂ ಇತ್ತೀಚೆಗೆ ಕೋವಿಡ್–19 ದೃಢಪಟ್ಟಿತ್ತು. ಈಗ ಅವರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.