ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಖರ್ ಧವನ್ ಶತಕದ ದಾಖಲೆ

Last Updated 14 ಜೂನ್ 2018, 14:57 IST
ಅಕ್ಷರ ಗಾತ್ರ

ಬೆಂಗಳೂರು: ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಗುರುವಾರ ಅಫ್ಘಾನಿಸ್ತಾನ ವಿರುದ್ಧ ಆರಂಭವಾದ ಟೆಸ್ಟ್ ನಲ್ಲಿ ಶತಕ ದಾಖಲಿಸಿದರು.

ಟೆಸ್ಟ್ ಪಂದ್ಯವೊಂದರಲ್ಲಿ ಊಟದ ವಿರಾಮಕ್ಕೂ ಮುನ್ನವೇ ಶತಕ ಗಳಿಸಿದ ಭಾರತದ ಮೊದಲ ಆಟಗಾರನೆಂಬ ದಾಖಲೆ ಬರೆದರು.

ಎಡಗೈ ಬ್ಯಾಟ್ಸ್‌ಮನ್ ಶಿಖರ್ 87 ಎಸೆತಗಳಲ್ಲಿ 100 ರನ್ ಗಳಿಸಿದರು. ಅದರಲ್ಲಿ 18 ಬೌಂಡರಿ, 3 ಸಿಕ್ಸರ್ ಇದ್ದವು.

ಟಾಸ್ ಗೆದ್ದು ಬ್ಯಾಟಿಂಗ್ ಮಾಡುತ್ತಿರುವ ಭಾರತ ಊಟದ ವಿರಾಮಕ್ಕೆ 27 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 158 ರನ್ ಗಳಿಸಿದೆ. ಮುರಳಿ ವಿಜಯ್ 41 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.

ಅಫ್ಗನ್ ತಂಡಕ್ಕೆ ಇದು ಮೊಟ್ಟಮೊದಲ ಟೆಸ್ಟ್‌ ಪಂದ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT