ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರಂಜೀವಿ ನಟನೆಯ ‘ಗಾಡ್ ಫಾದರ್’ ಸಿನಿಮಾದ ಲಿರಿಕಲ್‌ ಹಾಡು ಬಿಡುಗಡೆ

Last Updated 22 ಸೆಪ್ಟೆಂಬರ್ 2022, 12:28 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲುಗಿನ ‘ಮೆಗಾ ಸ್ಟಾರ್’ಚಿರಂಜೀವಿನಟನೆಯ‘ಗಾಡ್ ಫಾದರ್’ ಸಿನಿಮಾದ ಲಿರಿಕಲ್‌ ಹಾಡು ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರದಲ್ಲಿ ನಟ ಸಲ್ಮಾನ್ ಖಾನ್ ಕೂಡ ಒಂದು ಅತಿಥಿ ಪಾತ್ರ ಮಾಡಿದ್ದಾರೆ. ಇಬ್ಬರು‘ಥಾರ್ ಮಾರ್ ಥಕ್ಕರ್ ಮಾರ್..’ ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೊ ಬಿಡುಗಡೆ ಮಾಡಲಾಗಿದೆ.

ಈ ಹಾಡಿಗೆ ನೃತ್ಯ ನಿರ್ದೇಶನವನ್ನು ಸರಿಯಾಗಿ ಮಾಡಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಹೇಳುತ್ತಿದ್ದಾರೆ. ಸಂಗೀತ ಚೆನ್ನಾಗಿರುವ ಹಾಡಿಗೆ ನೃತ್ಯ ನಿರ್ದೇಶನವನ್ನು ಸರಿಯಾಗಿ ಮಾಡಿಲ್ಲ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ.

ಈಗ ಬಿಡುಗಡೆ ಮಾಡಿರುವುದು ಲಿರಿಕಲ್‌ ವಿಡಿಯೊ ಮಾತ್ರ, ಮುಂದೆ ವಿಡಿಯೊ ಸಾಂಗ್‌ ಬಿಡುಗಡೆಯಾಗಲಿದೆ. ಆಗ ಅಭಿಮಾನಿಗಳಿಗೆ ನಿರಾಸೆಯಾಗುವುದಿಲ್ಲ ಎಂದು ಚಿತ್ರತಂಡ ಹೇಳಿದೆ.

ನಟ ಪ್ರಭುದೇವ ಅವರು ‘ಥಾರ್ ಮಾರ್ ಥಕ್ಕರ್ ಮಾರ್..’ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡಿನಲ್ಲಿ ಅವರು ಯಾವುದೇ ಮ್ಯಾಜಿಕ್ ಮಾಡಿಲ್ಲ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.

ಇದು ಮಲಯಾಳಂನ ‘ಲೂಸಿಫರ್’ ಚಿತ್ರದ ರಿಮೇಕ್. ಈ ಸಿನಿಮಾ ಮೇಲೆ ಚಿರಂಜೀವಿ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT