ಗುರುವಾರ , ಅಕ್ಟೋಬರ್ 21, 2021
29 °C

ಅಜಿತ್‌ ನಟನೆಯ ’ವಲಿಮೈ’ ಚಿತ್ರ ಸಂಕ್ರಾಂತಿಗೆ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಮಿಳಿನ ಖ್ಯಾತ ನಟ ಅಜಿತ್ ಕುಮಾರ್ ನಟನೆಯ ಭಾರಿ ನಿರೀಕ್ಷೆಯ ಚಿತ್ರ ’ವಲಿಮೈ’ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗಲಿದೆ. 

2022ರ ಸಂಕ್ರಾಂತಿಗೆ ’ವಲಿಮೈ’ ಸಿನಿಮಾ ತೆರೆಗೆ ಬರುವುದನ್ನು ಚಿತ್ರತಂಡ ಖಚಿತಪಡಿಸಿದೆ. ಬಾಲಿವುಡ್ ಖ್ಯಾತ ನಿರ್ಮಾಪಕ ಬೋನಿ ಕಪೂರ್‌ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಸಂಕ್ರಾಂತಿಗೆ ಬಿಡುಗಡೆಯಾಗಲಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. 

’ಸಂಕ್ರಾಂತಿ (ಪೊಂಗಲ್‌) ಹಬ್ಬಕ್ಕೆ ’ವಲಿಮೈ’ ಸಿನಿಮಾ ಚಿತ್ರಮಂದಿರಗಳಿಗೆ ಬರುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗಿದೆ’ ಬೋನಿ ಕಪೂರ್‌ ಟ್ವೀಟ್‌ ಮಾಡಿದ್ದಾರೆ. 

ವಲಿಮೈ ಚಿತ್ರವನ್ನು ಎಚ್. ವಿನೋತ್‌ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಎಡಿಟಿಂಗ್‌ ಹಂತದ ಕೆಲಸಗಳು ನಡೆಯುತ್ತಿವೆ ಎಂದು ಚಿತ್ರತಂಡ ಹೇಳಿದೆ.   

ವಲಿಮೈನಲ್ಲಿ ನಾಯಕಿಯಾಗಿ ಹುಮಾ ಖುರೇಶಿ ನಟಿಸಿದ್ದಾರೆ. ತೆಲುಗು ನಟ ಕಾರ್ತಿಕೇಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯೋಗಿ ಬಾಬು, ಸುಮಿತ್ರಾ ಸೇರಿದಂತೆ ಹಲವರು ತಾರಾಬಳಗದಲ್ಲಿ ಇದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು