ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

32 ವರ್ಷಗಳ ಬಳಿಕ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳಲಿರುವ ಅಮಿತಾಬ್‌ –ರಜನಿ

Published 4 ಅಕ್ಟೋಬರ್ 2023, 12:59 IST
Last Updated 4 ಅಕ್ಟೋಬರ್ 2023, 12:59 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಚಿತ್ರರಂಗದ ಪ್ರಮುಖ ನಟರಾದ ಅಮಿತಾಬ್‌ ಬಚ್ಚನ್‌ –ರಜನಿಕಾಂತ್ ಅವರು 32 ವರ್ಷಗಳ ಬಳಿಕ ಮತ್ತೆ ತೆರೆಯ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ.

ಈ ಹಿಂದೆ ‘ಹಮ್’, ‘ಗಿರಫ್ತಾರ್’ ಹಾಗೂ ‘ಅಂಧಾ ಕಾನೂನ್’ ಚಿತ್ರಗಳಲ್ಲಿ ಅಮಿತಾಬ್‌ –ರಜನಿ ಜೊತೆಯಾಗಿ ನಟಿಸಿದ್ದರು. ಇದೀಗ ರಜನಿಕಾಂತ್‌ ಅಭಿನಯದ ಹೆಸರಿಡದ ಹೊಸ ಚಿತ್ರ ‘ತಲೈವರ್ 170’ನಲ್ಲಿ ಇವರಿಬ್ಬರು ಮತ್ತೆ ಒಟ್ಟಿಗೆ ಅಭಿನಯಿಸಲಿದ್ದಾರೆ.

ಈ ಚಿತ್ರವನ್ನು ಲೈಕಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸುಭಾಸ್ಕರನ್ ನಿರ್ಮಿಸಲಿದ್ದಾರೆ. ಈ ಕುರಿತು ಲೈಕಾ ಪ್ರೊಡಕ್ಷನ್ಸ್ ಇನ್‌ಸ್ಟಾಗ್ರಾಂನಲ್ಲಿ ಪ್ರಕಟಣೆ ಹಂಚಿಕೊಂಡಿದೆ.

ಅಮಿತಾಬ್ ಬಚ್ಚನ್ ಅವರು ಈ ಚಿತ್ರಕ್ಕೆ 20 ದಿನಗಳ ಕಾಲ್‌ಶೀಟ್ ನೀಡಿದ್ದು, ಇದಕ್ಕೆ ಅವರು ₹15 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಉಳಿದಂತೆ ಈ ಚಿತ್ರದಲ್ಲಿ ಮಲಯಾಳಂನ ಮಂಜು ವಾರಿಯರ್ ಮತ್ತು ಫಹಾದ್ ಫಾಸಿಲ್, ತೆಲುಗಿನ ರಾಣಾ ದಗ್ಗುಬಾಟಿ, ರಿತಿಕಾ ಸಿಂಗ್ ಮತ್ತು ದುಶಾರಾ ವಿಜಯನ್ ಕೂಡ ಇರಲಿದ್ದಾರೆ.

ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಲಿದ್ದಾರೆ.

ಇತ್ತೀಚೆಗೆ ತೆರೆಕಂಡಿದ್ದ ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಾಕ್ಸ್ ಆಫೀಸ್‌ನಲ್ಲೂ ಸಖತ್ ಸದ್ದು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT