ಚೆನ್ನೈ: ತಮಿಳು ನಟ 'ದಳಪತಿ' ವಿಜಯ್ ಅವರು ಇಂದು (ಬುಧವಾರ) 48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ವಿಜಯ್ ಹುಟ್ಟುಹಬ್ಬದ ಅಂಗವಾಗಿ ಚಿತ್ರರಂಗದ ಗಣ್ಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

1992ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ವಿಜಯ್ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದು, ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ದೇಶದಾದ್ಯಂತ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ವಿಜಯ್, ಗಲ್ಲಾಪೆಟ್ಟಿಗೆಯಲ್ಲಿ ಹಲವು ದಾಖಲೆಗಳನ್ನು ಮುರಿಯುವ ಮೂಲಕ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ.

ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ ಸೋಲು ಕಂಡಿತ್ತು. ಆದರೆ, ‘ಪೊಕ್ಕಿರಿ’, ‘ಪೂವೆ ಒನಕ್ಕಾಗ’, ‘ಕದಲುಕು ಮರಿಯದೈ’, ‘ಕತ್ತಿ’, ‘ಗಿಲ್ಲಿ’ ಸಿನಿಮಾಗಳು ಅವರಿಗೆ ಹೆಸರು ತಂದುಕೊಟ್ಟಿವೆ.

ಸದ್ಯ ವಂಶಿ ಪೈಡಿಪಲ್ಲಿ ನಿರ್ದೇಶನದ ಹೆಸರಿಡದ ಹೊಸ ಚಿತ್ರದಲ್ಲಿ ವಿಜಯ್ ಕಾಣಿಸಿಕೊಳ್ಳುತ್ತಿದ್ದು, ಚಿತ್ರೀಕರಣ ಇನ್ನಷ್ಟೇ ಆರಂಭವಾಗಬೇಕಿದೆ.

ಇವನ್ನೂಓದಿ...

ಶೋಭಿತಾ ಧುಲಿಪಾಲ ಜೊತೆ ನಾಗ ಚೈತನ್ಯ ಡೇಟಿಂಗ್: ಸಮಂತಾ ಪ್ರತಿಕ್ರಿಯೆ ಹೀಗಿತ್ತು?

ಥೈಲ್ಯಾಂಡ್ನಲ್ಲಿ ನಯನತಾರಾ– ವಿಘ್ನೇಶ್ ಹನಿಮೂನ್: ಹೊಸ ಫೋಟೊ ವೈರಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.