ಕನ್ನಡದ ಪ್ರೊಡಕ್ಷನ್ ಸಂಸ್ಥೆ ಕೆವಿಎನ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಇದೀಗ ದಳಪತಿ ವಿಜಯ್ ಅವರ ಅಭಿಮಾನಿಗಳಿಗೆ ಕೆವಿಎನ್ ಪ್ರೊಡಕ್ಷನ್ ಹೌಸ್ ಶುಭ ಸುದ್ದಿ ಕೊಟ್ಟಿದೆ.

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ನಟನೆಯ 'ಜನ ನಾಯಗನ್’ ಸಿನಿಮಾ ಆಡಿಯೊವನ್ನು ಮಲೇಷಿಯಾದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಈ ಕುರಿತು ಕೆವಿಎನ್ ಪ್ರೊಡಕ್ಷನ್ ಹೌಸ್ ಸಾಮಾಜಿಕ ಮಾಧ್ಯಮದಲ್ಲಿ ‘ನಾವು ಬರುತ್ತಿದ್ದೇವೆ. ಮಲೇಷಿಯಾದಲ್ಲಿ ಜನನಾಯಕನ ಆಡಿಯೊ ಬಿಡುಗಡೆ ಮಾಡುತ್ತಿದ್ದೇವೆ. ಡಿಸೆಂಬರ್ 27ರಂದು ನಿಮ್ಮನ್ನು ಭೇಟಿ ಮಾಡುತ್ತೇವೆ’ ಎಂದು ಬರೆದುಕೊಂಡಿದೆ.
.ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರದ ಫಸ್ಟ್ಲುಕ್ ಬಿಡುಗಡೆ.PHOTOS: ಸಿಟಿ ಲೈಟ್ಸ್ ಚಿತ್ರೀಕರಣ ವೇಳೆ ದುನಿಯಾ ವಿಜಯ್ ಭೇಟಿಯಾದ ಕಾಕ್ರೋಚ್ ಸುಧಿ.
ವಿಶೇಷ ಏನೆಂದರೆ ಈ ಆಡಿಯೊ ಬಿಡುಗಡೆ ಕಾರ್ಯಕ್ರಮವನ್ನು ಮಲೇಷಿಯಾದ ಬುಕಿಟ್ ಜಲೀಲ್ ಸ್ಟೇಡಿಯಂ, ಕೌಲಾಲಂಪುರ್ ಎಂಬಲ್ಲಿ ಡಿಸೆಂಬರ್ 27ರಂದು ಆಯೋಜನೆ ಮಾಡಲಾಗಿದೆ. ಈ ಆಡಿಯೊ ಕಾರ್ಯಕ್ರಮಕ್ಕೆ ಅಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆಯಿದೆ.

ಇನ್ನು, ವೆಂಕಟ್ ಕೆ.ನಾರಾಯಣ ನಿರ್ಮಾಣದ ಈ ದೊಡ್ಡ ಬಜೆಟ್ ಚಿತ್ರವನ್ನು ಎಚ್. ವಿನೋತ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ, ಸತ್ಯನ್ ಸೂರ್ಯನ್ ಛಾಯಾಚಿತ್ರಗ್ರಹಣ, ಆನ್ಲ್ ಅರಸು ಸಾಹಸ, ಪ್ರದೀಪ್ ಇ. ರಾಘವ ಸಂಕಲನ, ಶೇಖರ್ ವಿ.ಜಿ., ಸುಧನ್ ನೃತ್ಯ ನಿರ್ದೇಶನವಿದೆ. ದಳಪತಿ ವಿಜಯ್ ನಟನೆಯ 69ನೇ ಚಿತ್ರ ಇದಾಗಿದ್ದು, 2026ರ ಜನವರಿ 9ರಂದು ಚಿತ್ರ ತೆರೆಗೆ ಬರಲಿದೆ.

ಈ ಸಿನಿಮಾದಲ್ಲಿ ನಟ ವಿಜಯ್ ಖದರ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ನಟ ವಿಜಯ್ ಅವರ 51ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಚಿತ್ರತಂಡ ಸಿನಿಮಾದ ಫಸ್ಟ್ಲುಕ್ ಬಿಡುಗಡೆ ಮಾಡಿತ್ತು. ಜನ ನಾಯಗನ್ ಚಿತ್ರದ ಫಸ್ಟ್ ಲುಕ್ಗೆ ಉತ್ತಮ ಪ್ರತಿಕ್ರಿಯೆ ಕೂಡ ದೊರಕಿತ್ತು. ವಿಜಯ್ ಅವರು, ಸಿನಿಮಾಗಿಂತಲೂ ರಾಜಕೀಯದ ಕಡೆ ಹೆಚ್ಚಾಗಿ ಗಮನ ಹರಿಸುತ್ತಿದ್ದು, ತಮ್ಮದೇ ಹೊಸ ಪಕ್ಷದ ಕೆಲಸ ಕಾರ್ಯದಲ್ಲಿ ತೊಡಗಿದ್ದಾರೆ. ಇದು ಇವರ ಕೊನೆಯ ಚಿತ್ರವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.