ನಟಿ ಮೇಘನಾ ರಾಜ್ ಸರ್ಜಾ ನಟನೆಯ ‘ತತ್ಸಮ ತದ್ಭವ’ದ ಫಸ್ಟ್ ಲುಕ್ ಪೋಸ್ಟರ್ ಹೊರಬಂದಿದೆ. ನಿರ್ದೇಶಕ ಪನ್ನಗಭರಣ ಹಾಗೂ ಸ್ಫೂರ್ತಿ ಅನಿಲ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನೂತನ ಪ್ರತಿಭೆ ವಿಶಾಲ್ ಆತ್ರೇಯ ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ.
ವಿಶೇಷವೆಂದರೆ, ಫೆ. 19ರಂದು ‘ತತ್ಸಮ ತದ್ಭವ’ ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನೂರಕ್ಕೂ ಹೆಚ್ಚು ನಟನಟಿಯರು ತಮ್ಮ ಸಾಮಾಜಿಕ ಜಾಲತಾಣಗಳ ಪುಟಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲ. ಪ್ರಪಂಚದಾದ್ಯಂತ 30ಕ್ಕೂ ಹೆಚ್ಚಿನ ದೇಶಗಳಲ್ಲಿರುವ ಕನ್ನಡ ಹಾಗೂ ಇತರ ಸಂಘಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಪ್ರೋತ್ಸಾಹಿಸಿದ್ದಾರೆ ಎಂದಿದೆ ಚಿತ್ರತಂಡ
ಚಿತ್ರದ ಸುಮಧುರ ಹಾಡುಗಳಿಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಶ್ರೀನಿವಾಸ್ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಸಂಕಲನ, ನಿಖಿತ ಪ್ರಿಯ ವಸ್ತ್ರವಿನ್ಯಾಸ ಹಾಗೂ ಸಂತೋಷ್ ಪಂಚಾಲ್ ಕಲಾ ನಿರ್ದೇಶನ ‘ತತ್ಸಮ ತದ್ಭವ’ ಚಿತ್ರಕ್ಕಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.