ಭಾನುವಾರ, ಏಪ್ರಿಲ್ 2, 2023
23 °C

ಸೆಮಿಫೈನಲ್‌ನಲ್ಲಿ ‘ತಾಯಿ ಕಸ್ತೂರ್‌ ಗಾಂಧಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಸ್ತೂರ್‌ ಬಾ ಗಾಂಧಿಯವರ ಜೀವನವನ್ನು ಆಧರಿಸಿ ಬರಗೂರು ರಾಮಚಂದ್ರಪ್ಪ ಅವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್‌ ಗಾಂಧಿ’ ಸಿನಿಮಾ, ಇದೀಗ ಮೆಲ್ಬರ್ನ್‌ ಇಂಡಿಪೆಂಡೆಂಟ್‌ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗದಲ್ಲಿ ಸೆಮಿಫೈನಲ್‌ ಹಂತಕ್ಕೆ ಆಯ್ಕೆಯಾಗಿದೆ.

ಇತ್ತೀಚೆಗೆ ಲಾಸ್‌ ಏಂಜಲಿಸ್‌ ಸನ್‌ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಈ ಸಿನಿಮಾ ಪ್ರದರ್ಶನ ಕಂಡಿತ್ತು. 12ನೇ ದಾದಾ ಸಾಹೇಬ್‌ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೂ ಈ ಚಿತ್ರ ಆಯ್ಕೆಯಾಗಿತ್ತು. ಅಮೆರಿಕದ ಡಲ್ಲಾಸ್‌ ಚಿತ್ರೋತ್ಸವದಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಸಂಕಲನಕ್ಕಾಗಿ ಪ್ರಶಸ್ತಿ ಲಭಿಸಿತ್ತು. ಸುರೇಶ್‌ ಅರಸು ಈ ಚಿತ್ರದ ಸಂಕಲನಕಾರರು.

ಬರಗೂರು ಅವರು ಬರೆದ ‘ಕಸ್ತೂರ್ ಬಾ Vs ಗಾಂಧಿ’ ಕಾದಂಬರಿಯನ್ನು ಈ ಚಿತ್ರವು ಆಧರಿಸಿದೆ. ಈ ಕಾದಂಬರಿ ‘ಸುಧಾ’ ವಾರಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿತ್ತು.

‘ಕಸ್ತೂರ್‌ಬಾ ತಾಯಿಯಾಗಿ ಮತ್ತು ಪತ್ನಿಯಾಗಿ ಎದುರಿಸಿದ ಬಿಕ್ಕಟ್ಟುಗಳು, ಅಪರೂಪದ ದಾಂಪತ್ಯ ಮತ್ತು ಸಾಮಾಜಿಕ ಕಾಳಜಿಗಳು ಸಿನಿಮಾದ ಮುಖ್ಯ ಕಥಾವಸ್ತು’ ಎಂದಿದ್ದಾರೆ ನಿರ್ದೇಶಕರು.

ಕಸ್ತೂರ್‌ ಬಾ ಪಾತ್ರದಲ್ಲಿ ನಟಿ ಹರಿಪ್ರಿಯಾ ಹಾಗೂ ಗಾಂಧಿ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್‌ ಅಭಿನಯಿಸಿದ್ದಾರೆ. ಜನಮಿತ್ರ ಮೂವೀಸ್‌ ಬ್ಯಾನರ್‌ ಅಡಿ ಬಿ.ಜಿ. ಗೀತಾ ಅವರು ಈ ಚಿತ್ರ ನಿರ್ಮಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು