ಕೋಲ್ಕತ್ತ: 1946ರ ಕೋಲ್ಕತ್ತ ಗಲಭೆಯ ಕುರಿತ ನೈಜ ಘಟನೆಯಾಧಾರಿತ ಚಲನಚಿತ್ರ 'ದಿ ಬೆಂಗಾಲ್ ಫೈಲ್ಸ್’ನ ಟ್ರೈಲರ್ ಲಾಂಚ್ ಕಾರ್ಯಕ್ರಮವನ್ನು ಶನಿವಾರ ಪೊಲೀಸರು ತಡೆದಿದ್ದಾರೆ ಎಂದು ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಆರೋಪಿಸಿದ್ದಾರೆ.

ನಗರದ ಪ್ರತಿಷ್ಠಿತ ಹೋಟೆಲ್ನಲ್ಲಿ ಶನಿವಾರ ಮಧ್ಯಾಹ್ನದ ವೇಳೆಗೆ ಟ್ರೈಲರ್ ಲಾಂಚ್ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿತ್ತು.

ಸಿನಿಮಾಗೆ ಸೆನ್ಸಾರ್ ಮಂಡಳಿಯ ಅನುಮತಿ ದೊರೆತಿದೆ. ಕಲ್ಕತ್ತಾ ಹೈಕೋರ್ಟ್ ಕೂಡ ಸಿನಿಮಾ ಮೇಲಿನ ನಿಷೇಧಕ್ಕೆ ತಡೆ ನೀಡಿದೆ. ಹಾಗಿದ್ದರೂ ಕಾರ್ಯಕ್ರಮದ ಮೇಲೆ ನಿರ್ಬಂಧ ವಿಧಿಸಿರುವುದು ಜನರ ಮೂಲಭೂತ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ವಿವೇಕ್ ಅಗ್ನಿಹೋತ್ರಿ ಅವರು ಕಿಡಿಕಾರಿದ್ದಾರೆ.

‘ದಿ ಕಾಶ್ಮೀರಿ ಫೈಲ್ಸ್’, ‘ದಿ ತಾಶ್ಕೆಂಟ್ ಫೈಲ್ಸ್’ ಸಿನಿಮಾಗಳನ್ನು ನಿರ್ದೇಶಿಸಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಬೆಂಗಾಲ್ ಫೈಲ್ಸ್’ ಸಿನಿಮಾವು 1940ರ ಸುಮಾರಿಗೆ ಬಂಗಾಳದಲ್ಲಿ ಜರುಗಿದ ಕೋಮು ಸಂಘರ್ಷದ ಕುರಿತಾದ ನೈಜ ಘಟನೆಯಾಧಾರಿತ ಚಲನಚಿತ್ರವಾಗಿದೆ. ಸೆಪ್ಟಂಬರ್ 5ರಂದು ಸಿನಿಮಾ ತೆರೆಕಾಣಲಿದೆ. ಸಿನಿಮಾದಲ್ಲಿ ನಟ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಷಿ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಟ್ರೈಲರ್ ಲಾಂಚ್ ಕಾರ್ಯಕ್ರಮದ ವಿವಾದದ ಕುರಿತು ಪ್ರತಿಕ್ರಿಯಿಸಲು ಪೊಲೀಸರು ನಿರಾಕರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.