ಗುರುವಾರ , ಏಪ್ರಿಲ್ 2, 2020
19 °C

ಸಿನಿಮೋತ್ಸವಕ್ಕೆ ವಿಧ್ಯುಕ್ತ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಂಗಳೂರಿನ 12ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಕನ್ನಡದಲ್ಲಿ ವರ್ಷದಿಂದ ವರ್ಷಕ್ಕೆ ಚಿತ್ರಗಳ‌ ಸಂಖ್ಯೆ ಹೆಚ್ಚುತ್ತಿವೆ. ಆದರೆ, ಚಿತ್ರಗಳಲ್ಲಿ ಗುಣಮಟ್ಟ  ಸುಧಾರಣೆಯಾಗಬೇಕಿದೆ’ ಎಂದರು.

ಉದ್ಘಾಟನಾ ಸಿನಿಮಾವಾಗಿ ಇರಾನಿನ ಪರ್ಷಿಯನ್ ಭಾಷೆಯ ‘ಸಿನಿಮಾ ಖಾರ್’ ( ಸಿನಿಮಾ ಡಾಂಕಿ) (ನಿರ್ದೇಶನ: ಶಾಹೆದ ಅಹ್ಮದ್ ಲೂ) ಚಿತ್ರವನ್ನು ಪ್ರದರ್ಶಿಸಲಾಯಿತು.

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮಾತನಾಡಿ, ‘ಅಕಾಡೆಮಿಯ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ₹5 ಕೋಟಿ ಅನುದಾನ ನೀಡಿದೆ. ಈ ಹಣವನ್ನು ಸದ್ವಿನಿಯೋಗ ಮಾಡುತ್ತೇವೆ’ ಎಂದು ಹೇಳಿದರು.

ಫಿಲಂ ಸಿಟಿಗೆ ಬೇಡಿಕೆ: ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ನಟ ಯಶ್, ರಾಜ್ಯದಲ್ಲಿ ಸುಸಜ್ಜಿತವಾದ ಫಿಲಂ ಸಿಟಿ ನಿರ್ಮಿಸುವಂತೆ ಮುಖ್ಯಮಂತ್ರಿ ಎದುರು ಬೇಡಿಕೆ ಇಟ್ಟರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಸ್. ಎನ್. ಸಿದ್ದರಾಮಪ್ಪ ಸಿನಿಮೋತ್ಸವದ ಬಗ್ಗೆ
ಪ್ರಾಸ್ತಾವಿಕವಾಗಿ ಮಾತನಾಡಿದರು. 

ಇಲಾಖಾ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್, ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್. ಜಯರಾಜ್, ಸಿನಿಮೋತ್ಸವದ ಕಲಾತ್ಮಕ ನಿರ್ದೇಶಕ ಎನ್. ವಿದ್ಯಾಶಂಕರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು