ಮುಂಬೈ: ತಮಿಳು ನಟ ದಳಪತಿ ವಿಜಯ್ ಅಭಿನಯದ 'ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್' ಚಿತ್ರವು ಅಕ್ಟೋಬರ್ 3 ರಂದು ಒಟಿಟಿ ವೇದಿಕೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಒಒಟಿ ವೇದಿಕೆ ನೆಟ್‌ಫ್ಲಿಕ್ಸ್ ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದೆ.
ವಿಜಯ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ ವೆಂಕಟ್ ಪ್ರಭು ನಿರ್ದೇಶಿಸಿದ್ದಾರೆ.
ಚಿತ್ರದಲ್ಲಿ ಪ್ರಶಾಂತ್, ಪ್ರಭುದೇವ, ಸ್ನೇಹ, ಲೈಲಾ, ಮೀನಾಕ್ಷಿ ಚೌಧರಿ, ಮೋಹನ್, ಜಯರಾಮ್, ಅಜ್ಮಲ್ ಅಮೀರ್ ಮತ್ತು ಯೋಗಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಸಂಗೀತ ಹಾಗೂ ಸಿದ್ಧಾರ್ಥ ನುನಿ ಛಾಯಾಗ್ರಹಣವಿದೆ.
ನೆಟ್‌ಫ್ಲಿಕ್ಸ್‌ನಲ್ಲಿ ಈ ಚಿತ್ರ ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ತೆರೆ ಕಾಣಲಿದೆ. ಈ ಚಿತ್ರ ಚಿತ್ರಮಂದಿರಗಳಲ್ಲಿ ಸೆಪ್ಟೆಂಬರ್ 5ರಂದು ವಿಶ್ವದಾದ್ಯಂತ ಬಿಡುಗಡೆಯಾಗಿತ್ತು.
ಇನ್ನೂ ಹೆಸರಿಡದ ತಮ್ಮ 69ನೇ ಸಿನಿಮಾದಲ್ಲಿ ಸದ್ಯ ವಿಜಯ್ ಬ್ಯುಸಿಯಾಗಿದ್ದು, 2025ಕ್ಕೆ ಈ ಚಿತ್ರ ಬಿಡುಗಡೆಯಾಗಲಿದೆ ಎನ್ನಲಾಗಿದೆ.
ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ದಳಪತಿ ವಿಜಯ್ ಇತ್ತೀಚೆಗೆ ಘೋಷಿಸಿದ್ದರು. ತಮ್ಮ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ (ತಮಿಳುನಾಡು ವಿಜಯ ಪಕ್ಷ) ಎಂದು ನಾಮಕರಣ ಮಾಡಿದ್ದು, 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.
Ever seen a lion become a G.O.A.T?! 👀💥
— Netflix India South (@Netflix_INSouth) October 1, 2024
Thalapathy Vijay’s The G.O.A.T- The Greatest Of All Time is coming to Netflix on 3 October in Tamil, Telugu, Malayalam, Kannada & Hindi 🐐🔥#TheGOATOnNetflix pic.twitter.com/5mwZ2xdoSo
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.