ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 24ಕ್ಕೆ ಬರಲಿದೆ ರವಿಚಂದ್ರನ್‌ ಅಭಿನಯದ ‘ದ ಜಡ್ಜ್‌ಮೆಂಟ್‌’

Published 20 ಮೇ 2024, 21:30 IST
Last Updated 20 ಮೇ 2024, 21:30 IST
ಅಕ್ಷರ ಗಾತ್ರ

ಗುರುರಾಜ ಕುಲಕರ್ಣಿ ಆ್ಯಕ್ಷನ್‌ ಕಟ್‌ ಹೇಳಿರುವ ರವಿಚಂದ್ರನ್‌ ಪ್ರಮುಖವಾದ ಪಾತ್ರದಲ್ಲಿ ನಟಿಸಿರುವ ‘ದ ಜಡ್ಜ್‌ಮೆಂಟ್‌’ ಸಿನಿಮಾ ಮೇ 24ರಂದು ಬಿಡುಗಡೆಯಾಗಲಿದೆ. 

ಜಿ9 ಕಮ್ಯುನಿಕೇಷನ್‌ ಮೀಡಿಯಾ ಆ್ಯಂಡ್‌ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ‘ಇದು ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್ ಥ್ರಿಲ್ಲರ್ ಜಾನರ್‌ನ ಚಿತ್ರವಿದು. ‘ಯದ್ಧಕಾಂಡ’ ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ‌ ಚಿತ್ರದಲ್ಲಿ ವಕೀಲರ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಲಕ್ಷ್ಮೀ ಗೋಪಾಲಸ್ವಾಮಿ, ದಿಗಂತ್, ಧನ್ಯಾ, ಮೇಘನಾ ಗಾಂವ್ಕರ್, ರಂಗಾಯಣ ರಘು, ಪ್ರಕಾಶ್ ಬೆಳವಾಡಿ ಅವರನ್ನು ಒಳಗೊಂಡ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ. ಕರ್ನಾಟಕ ಮಾತ್ರವಲ್ಲದೆ, ದೆಹಲಿ, ಮುಂಬೈ, ಗೋವಾ, ಆಂಧ್ರಪ್ರದೇಶ ಸೇರಿದಂತೆ ದೇಶದ ವಿವಿಧ ಕಡೆ ರಿಲಯನ್ಸ್ ಎಂಟರ್‌ಟೈನ್ಮೆಂಟ್ ಸಂಸ್ಥೆ ಮೂಲಕ ಸಿನಿಮಾ ಬಿಡುಗಡೆಯಾಗಲಿದೆ’ ಎಂದರು ಗುರುರಾಜ ಕುಲಕರ್ಣಿ.

‘ಸಾಮಾನ್ಯವಾಗಿ ನನ್ನ ಸಿನಿಮಾ‌ ಹಾಡುಗಳ ಮೂಲಕ ಜನಪ್ರಿಯ.‌ ಆದರೆ ನನಗೆ ಈ ಚಿತ್ರದಲ್ಲಿ ಒಂದು ಹಾಡೂ ಇಲ್ಲ’ ಎಂದು ಟ್ರೇಲರ್‌ ಬಿಡುಗಡೆ ಕಾರ್ಯಕ್ರಮದಲ್ಲಿ ನಗೆಚಟಾಕಿ ಹಾರಿಸಿದರು ರವಿಚಂದ್ರನ್‌. ವಾಸುದೇವ ಮೂರ್ತಿ ಸಿನಿಮಾಗೆ ಚಿತ್ರಕಥೆ ಬರೆದಿದ್ದು, ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯ, ಎಂ.ಎಸ್ ರಮೇಶ್ ಸಂಭಾಷಣೆ ಚಿತ್ರಕ್ಕಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT