ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜೀವ ಬೆದರಿಕೆಯಿದೆ, ಹೊರಗಡೆ ಹೋಗುವಂತಿಲ್ಲ: ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್

ಅಕ್ಷರ ಗಾತ್ರ

ಬೆಂಗಳೂರು: ಕಾಶ್ಮೀರಿ ಪಂಡಿತರ ಜೀವನ ಕುರಿತಾದ ಕಥೆ ಹೊಂದಿರುವ ‘ದಿ ಕಾಶ್ಮೀರ್ ಫೈಲ್ಸ್‘ ಚಿತ್ರದ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ತಮಗೆ ಜೀವ ಬೆದರಿಕೆ ಇದೆ ಎಂದು ಬಹಿರಂಗಪಡಿಸಿದ್ದಾರೆ.

ಮನೆಯಿಂದ ಒಬ್ಬನೇ ಹೊರಹೋಗುವುದು ಸಾಧ್ಯವಿಲ್ಲ. ಅಲ್ಲದೆ, ನನ್ನ ಕುಟುಂಬವನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತ‍ಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಕಾಶ್ಮೀರ್ ಫೈಲ್ಸ್ ಚಿತ್ರ ಬಿಡುಗಡೆಯಾದ ದಿನದಿಂದಲೂ ಬೆದರಿಕೆ ಬರುತ್ತಿದೆ. ಹೊರಗಡೆ ಸ್ವತಂತ್ರವಾಗಿ ತಿರುಗಾಡಲು ಆಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಅನುಪಮ್ ಖೇರ್, ದರ್ಶನ್ ಕುಮಾರ್, ಪಲ್ಲವಿ ಜೋಶಿ ಮತ್ತು ಮಿಥುನ್ ಚಕ್ರವರ್ತಿ ಅಭಿನಯದ ಕಾಶ್ಮೀರ್ ಫೈಲ್ಸ್ ಚಿತ್ರ, ಮಾರ್ಚ್‌ 2022ರಲ್ಲಿ ಬಿಡುಗಡೆಯಾಗಿತ್ತು. ಅಲ್ಲದೆ, ಬಾಕ್ಸ್ ಆಫೀಸ್‌ನಲ್ಲಿ ₹340 ಕೋಟಿಗೂ ಅಧಿಕ ಗಳಿಕೆ ದಾಖಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT