ಶುಕ್ರವಾರ, ಜುಲೈ 1, 2022
28 °C

ಮೇ 13ಕ್ಕೆ ಜೀ5ನಲ್ಲಿ ‘ದಿ ಕಾಶ್ಮೀರ್‌ ಫೈಲ್ಸ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಳೆದ ಮಾರ್ಚ್‌ 11ರಂದು ಬಿಡುಗಡೆಯಾಗಿದ್ದ ವಿವೇಕ್‌ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್‌ ಫೈಲ್ಸ್‌’ ಚಿತ್ರವು ಮೇ 13ರಂದು ಒಟಿಟಿ ವೇದಿಕೆ ಜೀ5ನಲ್ಲಿ ಪ್ರಸಾರವಾಗಲಿದೆ.

ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತ ಈ ಚಿತ್ರವು ಬಿಡುಗಡೆಯಾದ ನಂತರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಹಲವು ರಾಜ್ಯಗಳು ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನೂ ನೀಡಿದ್ದವು. ರಾಜಕೀಯ ಕೆಸರೆರೆಚಾಟಕ್ಕೂ ಈ ಚಿತ್ರವು ವೇದಿಕೆ ಮಾಡಿತ್ತು. ಇದೆಲ್ಲದರ ನಡುವೆ ಬಾಕ್ಸ್‌ ಆಫೀಸ್‌ನಲ್ಲೂ ಈ ಚಿತ್ರ ಸದ್ದು ಮಾಡಿತ್ತು.

ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ಪ್ರಕಾಶ್‌ ಬೆಳವಾಡಿ ಮತ್ತು ದರ್ಶನ್ ಕುಮಾರ್ ಮುಂತಾದ ದಿಗ್ಗಜರೇ ನಟಿಸಿದ್ದ ಈ ಸಿನಿಮಾವು 1991ರಲ್ಲಿ ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಹಾಗೂ ವಲಸೆಯನ್ನು ಕಟ್ಟಿಕೊಟ್ಟಿತ್ತು. ಈ ಸಿನಿಮಾ, ಚಿತ್ರಮಂದಿರಗಳಲ್ಲಿ ಕೇವಲ ಹಿಂದಿ ಭಾಷೆಯಲ್ಲಿ ತೆರೆಕಂಡಿತ್ತು. ಆದರೆ ಜೀ5 ಒಟಿಟಿಯಲ್ಲಿ ನಾಲ್ಕು ಭಾಷೆಗಳಲ್ಲಿ ಈ ಚಿತ್ರವು ಪ್ರಸಾರವಾಗಲಿದೆ. ಕನ್ನಡ, ಹಿಂದಿ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಸಿನಿಮಾ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿರಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು