ಭಾನುವಾರ, ನವೆಂಬರ್ 27, 2022
27 °C
ಕಾಂತಾರ ಚಿತ್ರದಲ್ಲಿ ನಾಯಕಿ ಲೀಲಾ ಪಾತ್ರದಲ್ಲಿ ಸಪ್ತಮಿ ಗೌಡ ನಟಿಸಿದ್ದಾರೆ.

Video | ಕಾಂತಾರ ಚಿತ್ರದ ‘ಲೀಲಾ’ ಪಾತ್ರ ಸೃಷ್ಟಿಯಾಗಿದ್ದು ಹೇಗೆ? ಇಲ್ಲಿದೆ ನೋಡಿ..

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ಸಾಮಾಜಿಕ ತಾಣಗಳಲ್ಲಿ ಈಗ ಎಲ್ಲೆಲ್ಲೂ ‘ಕಾಂತಾರ’ ಚಿತ್ರದ್ದೇ ಮಾತು. ಕನ್ನಡದ ಚಿತ್ರವೊಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶನದ ಚಿತ್ರಕ್ಕೆ ಜನರಿಂದ ಪ್ರಶಂಸೆ ಕೇಳಿಬಂದಿದೆ.

ಕಾಂತಾರ ಚಿತ್ರದಲ್ಲಿ ರಿಷಬ್‌ ಶೆಟ್ಟಿ ಜತೆಗೆ ಕಿಶೋರ್‌, ಅಚ್ಯುತ್‌ ಕುಮಾರ್‌, ಸಪ್ತಮಿ ಗೌಡ, ಪ್ರಮೋದ್‌ ಶೆಟ್ಟಿ, ಮಾನಸಿ ಸುಧೀರ್‌ ಪ್ರಮುಖ ತಾರಾಗಣದಲ್ಲಿದ್ದಾರೆ.

ಸಪ್ತಮಿ ಗೌಡ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ‘ಲೀಲಾ’ ಹೆಸರಿನ ಪಾತ್ರ ಹೇಗೆ ಸೃಷ್ಟಿಯಾಯಿತು ಎನ್ನುವ ಕುರಿತು ಚಿತ್ರತಂಡ ವಿಡಿಯೊ ಒಂದನ್ನು ಬಿಡುಗಡೆ ಮಾಡಿದೆ.

ಹೊಂಬಾಳೆ ಫಿಲಂಸ್ ಕಾಂತಾರ ಚಿತ್ರವನ್ನು ನಿರ್ಮಾಣ ಮಾಡಿದೆ. ಬಿ. ಅಜನೀಶ್ ಲೋಕನಾಥ್ ಅವರ ಸಂಗೀತ, ಅರವಿಂದ್ ಎಸ್. ಕಶ್ಯಪ್ ಅವರ ಛಾಯಾಗ್ರಹಣ ಈ ಸಿನಿಮಾದಲ್ಲಿದೆ.

ಲೀಲಾ ಪಾತ್ರದ ಚಿತ್ರೀಕರಣದ ಕೆಲವು ಪ್ರಮುಖ ದೃಶ್ಯಗಳನ್ನು ಕಾಂತಾರದ ಮೇಕಿಂಗ್ ವಿಡಿಯೊದಲ್ಲಿ ಕಾಣಬಹುದಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು