ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಟ್ಟೇರಿತು ‘ಬಡವ್ರ ಮಕ್ಳೂ ಬೆಳಿಬೇಕು’ ಸಿನಿಮಾ

Published 11 ಏಪ್ರಿಲ್ 2024, 23:33 IST
Last Updated 11 ಏಪ್ರಿಲ್ 2024, 23:33 IST
ಅಕ್ಷರ ಗಾತ್ರ

ನಟ ಡಾಲಿ ಧನಂಜಯ ಅವರ ‘ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ’ ಎಂಬ ಹೇಳಿಕೆ ಸಾಕಷ್ಟು ಜನಪ್ರಿಯವಾಗಿತ್ತು. ಈ ಹೇಳಿಕೆಯನ್ನೇ ಶೀರ್ಷಿಕೆಯಾಗಿಸಿಕೊಂಡಿರುವ ಚಿತ್ರವೊಂದು ಸೆಟ್ಟೇರಿದೆ. ಶ್ರೀರಾಮ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿ.ಎಸ್.ವೆಂಕಟೇಶ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಂಜುಕವಿ ನಿರ್ದೇಶಿಸುತ್ತಿದ್ದಾರೆ.‌

‘ಡಾಲಿ ಅವರು ಹೇಳಿದ ಮಾತನ್ನು ಸ್ಫೂರ್ತಿಯಾಗಿಟ್ಟುಕೊಂಡು ಈ ಚಿತ್ರದ ಕಥೆ ಬರೆದಿದ್ದೇನೆ. ಬಡ ಕುಟುಂಬದಲ್ಲಿ ಹುಟ್ಟಿದ ಮಕ್ಕಳಿಗೆ ಎಷ್ಟೇ ಕಲೆ ಇದ್ದರೂ, ಚೆನ್ನಾಗಿ ಓದುವ ಹಂಬಲವಿದ್ದರೂ ಅವರನ್ನು ಬೆಳೆಸಲು ಯಾರು ಮುಂದೆ ಬರುವುದಿಲ್ಲ. ಅವರಲ್ಲಿರುವ ಪ್ರತಿಭೆ ನಶಿಸಿ ಹೋಗುತ್ತದೆ. ಪ್ರತಿಭೆಯುಳ್ಳ ಬಡಮಕ್ಕಳ ಕೀರ್ತಿ ಬೆಳಗಬೇಕು ಎಂಬುದು ಚಿತ್ರದ ಕಥಾಹಂದರ’ ಎಂದರು ನಿರ್ದೇಶಕರು.

ಸುಚೇಂದ್ರ ಪ್ರಸಾದ್ ಹಾಗೂ ಸಂಗೀತ ಅವರು ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರ ಮಕ್ಕಳ ಪಾತ್ರದಲ್ಲಿ ರಾಜವರ್ಧನ್, ಲಾವಣ್ಯ ವೈಭವಿ ಅಭಿನಯಿಸುತ್ತಿದ್ದಾರೆ. ನಾಲ್ಕು ಹಾಡುಗಳಿದ್ದು ನಿರ್ದೇಶಕರೇ ಸಂಗೀತ ನೀಡುತ್ತಿದ್ದಾರೆ. ವಿನುಮನಸು ಹಿನ್ನೆಲೆ ಸಂಗೀತ, ರೇಣುಕುಮಾರ್ ಛಾಯಾಚಿತ್ರಗ್ರಹಣ, ವೆಂಕಿ ಯುಡಿವಿ ಸಂಕಲನವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT