ನಟ ಪ್ರಭಾಸ್ ನಟನೆಯ ಹೊಸ ಸಿನಿಮಾ ‘ದಿ ರಾಜಾಸಾಬ್’ ಜ.9ರಂದು ತೆರೆಕಾಣುತ್ತಿದ್ದು, ಕರ್ನಾಟಕದಲ್ಲಿ ಹೊಂಬಾಳೆ ಫಿಲ್ಮ್ಸ್ ಈ ಸಿನಿಮಾವನ್ನು ವಿತರಣೆ ಮಾಡಲಿದೆ.

ಕರ್ನಾಟಕದಾದ್ಯಂತ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ. ಈಗಾಗಲೇ ಪರಭಾಷೆಗಳ ಹಲವು ಸಿನಿಮಾಗಳನ್ನು ವಿತರಣೆ ಮಾಡಿ ಗೆದ್ದಿರುವ ಹೊಂಬಾಳೆ ‘ರಾಜಾಸಾಬ್’ ಗಳಿಕೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆ್ಯಕ್ಷನ್ ಅವತಾರದಲ್ಲಿಯೇ ತೆರೆಗಳಲ್ಲಿ ಮಿಂಚಿರುವ ಪ್ರಭಾಸ್, ಇದೇ ಮೊದಲ ಬಾರಿಗೆ ಈ ಸಿನಿಮಾ ಮೂಲಕ ಹಾರರ್ ಜಾನರ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಸಿನಿಮಾದ ಟ್ರೇಲರ್ ಕಥೆಯ ಬಗ್ಗೆ ಕುತೂಹಲ ಮೂಡಿಸಿದೆ.

ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಟಿ.ಜಿ. ವಿಶ್ವಪ್ರಸಾದ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬಂದಿದ್ದು, ಮಾರುತಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಪ್ರಭಾಸ್ಗೆ ನಾಯಕಿಯರಾಗಿ ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್ ಮತ್ತು ರಿದ್ಧಿ ಕುಮಾರ್ ನಟಿಸಿದ್ದಾರೆ. ದೊಡ್ಡ ಬಜೆಟ್ನ ಈ ಚಿತ್ರಕ್ಕೆ ಕಾರ್ತಿಕ್ ಪಲನಿ ಛಾಯಾಚಿತ್ರಗ್ರಹಣವಿದೆ. ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳ ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗಲಿದೆ.