‘ಕವಲುದಾರಿ’, ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶಕ ಹೇಮಂತ್ ಎಂ.ರಾವ್ ನಿರ್ದೇಶನದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯುತ್ತಿದೆ. ನಟ ಸುದೀಪ್ ಸೆಟ್ಗೆ ಭೇಟಿ ನೀಡಿ ಉತ್ತೇಜಿಸಿದ್ದಾರೆ.

ಸಿನಿಮಾದ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ನಟರಾದ ಶಿವರಾಜ್ಕುಮಾರ್ ಹಾಗೂ ಧನಂಜಯ ರೆಟ್ರೋ ಲುಕ್ನಲ್ಲಿ ಕಾಣಿಸಿಕೊಂಡಿದ್ದು, ಎರಡನೇ ಹಂತದ ಚಿತ್ರೀಕರಣ ಕಂಠೀರವ ಸ್ಟುಡಿಯೊದಲ್ಲಿನ ಅದ್ಧೂರಿ ಸೆಟ್ನಲ್ಲಿ ನಡೆಯುತ್ತಿದೆ. ಈ ಸೆಟ್ನಲ್ಲಿ ಬರೋಬ್ಬರಿ 100 ದಿನ ಶೂಟಿಂಗ್ ನಡೆಸಲಿದೆ ಚಿತ್ರತಂಡ. ಡಾ.ವೈಶಾಖ್ ಜೆ. ಗೌಡ ಅವರ ‘ವೈಶಾಖ್ ಜೆ. ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಚರಣ್ ರಾಜ್ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಛಾಯಾಚಿತ್ರಗ್ರಹಣ ಈ ಸಿನಿಮಾಗಿದೆ. ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.