ಮುಂಬೈ: ಬಾಲಿವುಡ್ ನಟ ಸಿದ್ಧಾರ್ಥ ಮಲ್ಹೋತ್ರಾ ಹಾಗೂ ಕನ್ನಡತಿ ರಶ್ಮಿಕಾ ಮಂದಣ್ಣ ಅಭಿನಯದ ‘ಮಿಷನ್ ಮಜ್ನು’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

ಸಿನಿಮಾದ ಟ್ರೈಲರ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮತ್ತೊಂದು ಹಿಂದಿ ಸಿನಿಮಾ ‘ರಾಜಿ‘ ಹಾಗೂ ಈ ಸಿನಿಮಾಗೂ ಸಾಮ್ಯತೆ ಇದೆ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ರಶ್ಮಿಕಾ ನಾಯಕಿಯಾಗಿರುವ ಮೊದಲ ಬಾಲಿವುಡ್ ಸಿನಿಮಾವಾದ ‘ಮಿಷನ್ ಮಜ್ನು‘ ಜನವರಿ 20ರಂದು ನೆಟ್ಫ್ಲಿಕ್ಸ್ (Netflix)ನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿಲ್ಲ.

ಶಂತನು ಬಾಗ್ಚಿ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಪರ್ಮೀತ್ ಸೇಠಿ, ಝಾಕಿರ್ ಹುಸೇನ್, ಶರೀಬ್ ಹಷ್ಮಿ ಸೇರಿದಂತೆ ಹಲವರು ನಟಿಸಿದ್ದಾರೆ. ಮಿಷನ್ ಮಜ್ನು ಸಿನಿಮಾವನ್ನು ರೂನಿ ಸೋಲಿ, ಅಮರ್ ಬುಟಾಲಾ ಹಾಗೂ ಗರಿಮಾ ಮೆಹ್ತಾ ನಿರ್ಮಾಣ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.