ಬೆಂಗಳೂರು: ಸಿನಿಮಾ ನಟಿ ವಿನಯಾ ಪ್ರಸಾದ್ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಈ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಂದಿನಿ ಲೇಔಟ್ 4ನೇ ಹಂತದ ರೈಲ್ವೆ ಮೆನ್ಸ್ ಕಾಲೊನಿಯಲ್ಲಿ ಪತಿ ಜೊತೆ ವಾಸವಿರುವ ವಿನಯಾ ಪ್ರಸಾದ್ ಅವರು ಕಳ್ಳತನ ಸಂಬಂಧ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ವಿನಯಾ ಪ್ರಸಾದ್ ದಂಪತಿ ಅ. 22ರಂದು ಉಡುಪಿಗೆ ಹೋಗಿದ್ದರು. ಅ. 26ರಂದು ಸಂಜೆ ಮನೆಗೆ ವಾಪಸು ಬಂದು ನೋಡಿದಾಗ, ಕಳ್ಳತನ ಗಮನಕ್ಕೆ ಬಂದಿದೆ. ಮನೆಯ ಬಾಗಿಲು ಮೀಟಿ ಒಳನುಗ್ಗಿದ್ದ ಕಳ್ಳರು, ಹಲವೆಡೆ ಹುಡುಕಾಡಿದ್ದಾರೆ. ಕೊಠಡಿಯ ಡ್ರಾಯರ್‌ನಲ್ಲಿದ್ದ ₹ 7 ಸಾವಿರ ನಗದು ಕದ್ದೊಯ್ದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.