ಬುಧವಾರ, ಜನವರಿ 19, 2022
23 °C

ಸಲ್ಮಾನ್‌ ಖಾನ್‌ ಭೇಟಿಯಾದ ನಿರ್ದೇಶಕ ರಾಜಮೌಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

'ಆರ್‌ಆರ್‌ಆರ್' ಸಿನಿಮಾದ ನಿರ್ದೇಶಕ ರಾಜಮೌಳಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರನ್ನು ಭೇಟಿ ಮಾಡಿರುವುದು ಬಾಲಿವುಡ್‌ ವಲಯದಲ್ಲಿ ಸಂಚಲನ ಮೂಡಿಸಿದೆ.

ರಾಜಮೌಳಿ ಅವರು ಸಲ್ಮಾನ್‌ ಖಾನ್‌ ಅವರ ಜೊತೆ ಯಾವುದೇ ಸಿನಿಮಾವನ್ನು ಮಾಡುತ್ತಿಲ್ಲ. ಬದಲಾಗಿ ಆರ್‌ಆರ್‌ಆರ್‌ ಸಿನಿಮಾದ ಪ್ರೀಮಿಯರ್‌ ಶೋಗಾಗಿ ಅವರನ್ನು ಆಹ್ವಾನಿಸಿದ್ದಾರೆ ಎಂದು ರಾಜಮೌಳಿ ಆಪ್ತರು ಸ್ಪಷ್ಟಪಡಿಸಿದ್ದಾರೆ.

ಆರ್‌ಆರ್‌ಆರ್‌ ಸಿನಿಮಾ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾದ ಪ್ರೀಮಿಯರ್‌ ಶೋ ಅನ್ನು ದುಬೈನಲ್ಲಿ ಏರ್ಪಡಿಸಲಾಗಿದೆ. ಈ ಸಿನಿಮಾ ವೀಕ್ಷಣೆಗಾಗಿ ಸಲ್ಮಾನ್‌ ಖಾನ್‌ ಅವರಿಗೆ ಆಹ್ವಾನ ನೀಡಿದ್ದು ಅವರು ಒಪ್ಪಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಇದರ ದಿನಾಂಕ ಇನ್ನು ಅಧಿಕೃತವಾಗಿ ಬಿಡುಗಡೆಯಾಗಿಲ್ಲ.

ಡಿವಿವಿ ಎಂಟರ್‌ಟೈನ್‌ಮೆಂಟ್ಸ್ ಸಂಸ್ಥೆಯು ಸುಮಾರು ₹400 ಕೋಟಿಯಲ್ಲಿ ನಿರ್ಮಿಸುತ್ತಿರುವ ಈ ಚಿತ್ರವು 20ನೇ ಶತಮಾನದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮರಾಜು ಮತ್ತು ಕೋಮರಂ ಭೀಮ್‌ ಅವರ ಜೀವನ ಕಥೆಯನ್ನು ಆಧರಿಸಿದೆ.

ಈ ಚಿತ್ರದಲ್ಲಿ ರಾಮ್‌ಚರಣ್ ಅಲ್ಲೂರಿ ಸೀತಾರಾಮರಾಜು ಪಾತ್ರದಲ್ಲಿ, ಎನ್‌ಟಿಆರ್ ಜೂನಿಯರ್ ಕೋಮರಂ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ನಟರಾದ ಅಜಯ್ ದೇವ್‌ಗನ್ ಮತ್ತು ಆಲಿಯಾ ಭಟ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು