ಮುಂಬೈ: ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಸುರೇಖಾ ಸಿಕ್ರಿ(75) ಅವರು ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕಳೆದ ಕೆಲ ತಿಂಗಳುಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಸುರೇಖಾ ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

'ಸುರೇಖಾ ಸಿಕ್ರಿ ಇಂದು(ಶುಕ್ರವಾರ) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರು ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು' ಎಂದು ಮ್ಯಾನೇಜರ್ ಓಂ ಸಾಯಿ ರಾಮ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

1978 ರಲ್ಲಿ ಬಿಡುಗಡೆಯಾದ ಕಿಸ್ಸಾ ಕುರ್ಸಿ ಕಾ ಚಿತ್ರದ ಮೂಲಕ ಸುರೇಖಾ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ತಮಸ್ (1988), ಮಮ್ಮೊ (1995) ಮತ್ತು ಬಧಾಯಿ ಹೋ (2018) ಚಿತ್ರಗಳಲ್ಲಿನ ಪಾತ್ರಗಳಿಗಾಗಿ ಅವರು ಮೂರು ಬಾರಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.