ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಥ್ರಿಲ್ಲರ್ ಮಂಜು ಹೊಸ ಅಧ್ಯಾಯ ‘ಡೆಡ್ಲಿ ಕಿಲ್ಲರ್’

Published 18 ಆಗಸ್ಟ್ 2023, 23:30 IST
Last Updated 18 ಆಗಸ್ಟ್ 2023, 23:30 IST
ಅಕ್ಷರ ಗಾತ್ರ

ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಆ್ಯಕ್ಷನ್‌ ಕಟ್‌ ಹೇಳಿ, ನಟಿಸಿರುವ ‘ಡೆಡ್ಲಿ ಕಿಲ್ಲರ್’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ‘ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಹೇಳದೆ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದೆ’ ಎಂದು ಚಿತ್ರತಂಡ ಹೇಳಿದೆ.

ಪ್ರಶಾಂತ್ ಟಿ.ತಂಬ್ರಳ್ಳಿಮಠ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆ್ಯಕ್ಷನ್‌, ಥ್ರಿಲ್ಲರ್, ಹಾರರ್ ಕಥಾಹಂದರ ಹೊಂದಿರುವ ಚಿತ್ರದಲ್ಲಿ ಹೊಸಬರಾದ ಅಭಯ್‌ವೀರ್ ಹಾಗೂ ನಿವೀಕ್ಷಾ ಜೋಡಿಯಾಗಿದ್ದಾರೆ. 

ಈ ಚಿತ್ರದಲ್ಲಿ ಮೂರು ಹಾಡುಗಳಿದ್ದು, ವಿನು ಮನಸು ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಲ್ಲದೆ ಮಲ್ಲಿಕಾರ್ಜುನ್ ಅವರ ಛಾಯಾಗ್ರಹಣ, ದೀಪು ಅವರ ಸಂಕಲನ ಈ ಚಿತ್ರಕ್ಕಿದೆ. ಆರು ಸಾಹಸ ದೃಶ್ಯಗಳಿವೆ.

ಲೋಕೇಂದ್ರ ಸೂರ್ಯ, ಥ್ರಿಲ್ಲರ್ ಮಂಜು, ಸುನಿಲ್ ಬಾಲ್ಡರ್ ಮುಂತಾದವರು ತಾರಾಗಣದಲ್ಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT