ನಟ ರವಿಚಂದ್ರ ವಿ. ಅವರ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕನಾಗಿ ನಟಿಸಿರುವ ‘ತ್ರಿವಿಕ್ರಮ’ ಚಿತ್ರ ಜೂನ್ 24ರಂದು ತೆರೆ ಕಾಣಲಿದೆ. ಮೂರು ವರ್ಷಗಳ ಹಿಂದೆ ಚಿತ್ರ ನಿರ್ಮಾಣ ಪೂರ್ಣಗೊಂಡಿತ್ತು. ಕೋವಿಡ್ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು.

‘ನಾನು ರವಿಚಂದ್ರ ಅವರ ಮಗ ಹೌದು. ಆದರೆ ಚಿತ್ರರಂಗಕ್ಕೆ ನಾಯಕನಾಗಿ ಹೊಸಬ. ನಮ್ಮ ಚಿತ್ರ ನೋಡಿ ಹಾರೈಸಿ’ ಎಂದರು ನಾಯಕ ವಿಕ್ರಮ್ ರವಿಚಂದ್ರನ್.

ವಿಕ್ರಮ್ ಅವರಿಲ್ಲಿ ಮಧ್ಯಮವರ್ಗದ ಹುಡುಗನಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ. ಮಿಡಲ್ ಕ್ಲಾಸ್ ಫ್ಯಾಮಿಲಿ ಹುಡುಗ, ಹೈ ಕ್ಲಾಸ್ ಫ್ಯಾಮಿಲಿ ಹುಡುಗಿಯನ್ನು ಏಕೆ ಲವ್ ಮಾಡಬಾರದು? ಎಂಬ ವಿಷಯವನ್ನು ಈ ಚಿತ್ರದಲ್ಲಿ ಹೇಳ ಹೊರಟಿದ್ದೇನೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಅಮ್ಮನ ಕುರಿತಾದ ಹಾಡು ಈಗಾಗಲೇ ಜನಮನ ಗೆದ್ದಿದೆ. ಇದು ನನ್ನ ಮೂರನೇ ಚಿತ್ರ. ಹಿಂದಿನ ಚಿತ್ರಗಳಿಗೆ ತಾವು ನೀಡಿದ ಪ್ರೋತ್ಸಾಹವನ್ನು ಈ ಚಿತ್ರಕ್ಕೂ ಮುಂದುವರಿಸಿ’ ಎಂದರು ನಿರ್ದೇಶಕ ಸಹನಾಮೂರ್ತಿ.

ನಿರ್ದೇಶಕ ಸಹನಾಮೂರ್ತಿ ಈ ಚಿತ್ರದ ಕಥೆ ಸಿದ್ಧಮಾಡಿಕೊಂಡು ಅನೇಕರ ಬಳಿ ಹೇಳುತ್ತಿದ್ದ. ಕೊನೆಗೆ ನಾನು ಕೇಳಿದ್ದೆ. ಚಿತ್ರದ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ. ಹಾಗಾಗಿ ನಾನು ಸಿನಿಮಾ ಮಾಡಲು ಒಪ್ಪಿಕೊಂಡೆ. 2019ರಲ್ಲಿ ಚಿತ್ರ ಆರಂಭವಾಯಿತು. ಅಪ್ಪು ಸರ್ ಬಂದು ಕ್ಲ್ಯಾಪ್ ಮಾಡಿದ್ದರು’ ಎಂದರು ನಿರ್ಮಾಪಕ ಸೋಮಣ್ಣ.

‘ಈ ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಅಭಿನಯಿಸುವಾಗ ವಿಕ್ರಮ್ ಸರ್ ಸಾಕಷ್ಟು ಸಹಾಯ ಮಾಡಿದರು’ ಎಂದು ನಾಯಕಿ ಆಕಾಂಕ್ಷಾ ಶರ್ಮ ತಿಳಿಸಿದರು.

‘ಹಿಂದೆ ‘ಜನುಮದ ಜೋಡಿ’ ಚಿತ್ರ ಬಂದಾಗ, ಜನ ಎಷ್ಟೋ ದಿನ ಅದೇ ಗುಂಗಿನಲಿದ್ದರು. ಜನರನ್ನು ಮತ್ತೆ ಚಿತ್ರಮಂದಿರದತ್ತ ಕರೆದುಕೊಂಡು ಬರುವ ಚಿತ್ರ ಬರಬೇಕು. ಅಂತಹ ಚಿತ್ರ ‘ತ್ರಿವಿಕ್ರಮ’ ಆಗಲಿ. ವಿಕ್ಕಿ ಸೇರಿದಂತೆ ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದರು ಸಾಧುಕೋಕಿಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.