ಭಾನುವಾರ, ಮೇ 29, 2022
21 °C

ಗಣಪತ್ ಚಿತ್ರದ ಶೂಟಿಂಗ್‌ ವೇಳೆ ಟೈಗರ್ ಶ್ರಾಫ್ ಕಣ್ಣಿಗೆ ಗಾಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Tiger Shroff Instagram

ಬೆಂಗಳೂರು: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರು ಗಣಪತ್ ಸಿನಿಮಾದ ಚಿತ್ರೀಕರಣ ಸಂದರ್ಭದಲ್ಲಿ ಗಾಯಗೊಂಡಿದ್ದಾರೆ.

ಇಂಗ್ಲೆಂಡ್‌ನಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದ ವೇಳೆ ಟೈಗರ್ ಶ್ರಾಫ್ ಕಣ್ಣಿಗೆ ಗಾಯವಾಗಿದೆ.

ಈ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಎಡಗಣ್ಣಿನ ಸುತ್ತಲೂ ಕಪ್ಪಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಗಣಪತ್ ಚಿತ್ರವನ್ನು ವಿಕಾಸ್ ಬಾಹ್ಲ್ ನಿರ್ದೇಶಿಸುತ್ತಿದ್ದು, ಕೃತಿ ಸನೋನ್ ನಾಯಕಿಯಾಗಿ ನಟಿಸುತ್ತಿದ್ದಾರೆ.


ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಪೋಸ್ಟ್

ಡಿಸೆಂಬರ್ 23, 2022ರಂದು ಸಿನಿಮಾ ತೆರೆಕಾಣಲಿದೆ. ಸಿನಿಮಾದ ಟೀಸರ್ ವಿಡಿಯೊವನ್ನು ಚಿತ್ರತಂಡ ಹಂಚಿಕೊಂಡಿದೆ.

ನಟ ಟೈಗರ್ ಶ್ರಾಫ್ ಮತ್ತು ನಟಿ ಕೃತಿ ಸನೋನ್ ಟೀಸರ್ ವಿಡಿಯೊ ಪೋಸ್ಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು