ಬುಧವಾರ, ಜೂನ್ 29, 2022
24 °C

‘H/34 ಪಲ್ಲವಿ ಟಾಕೀಸ್‌’ ಒಟಿಟಿಯಲ್ಲೇ ತೆರೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ ತಿಲಕ್ ಅಭಿನಯದ ‘H/34 ಪಲ್ಲವಿ ಟಾಕೀಸ್’ ಚಿತ್ರವು ಜೂನ್‌ ಎರಡನೇ ವಾರದಲ್ಲಿ ಒಟಿಟಿ ವೇದಿಕೆ ಮುಖಾಂತರ ತೆರೆ ಕಾಣಲಿದ್ದು, ಚಿತ್ರದ ಹಾಡೊಂದನ್ನು ಆನಂದ್‌ ಆಡಿಯೊ ಮೂಲಕ ಬಿಡುಗಡೆ ಮಾಡಲಾಗಿದೆ.

ಶ್ರೀನಿವಾಸ್‌ ಚಿಕ್ಕಣ್ಣ (ಸೀನಿ) ಅವರು ಬರೆದ ಈ ‘ಬರೆವೆ ಬರೆವೆ ಒಲವ ಕವನ’ ಹಾಡನ್ನು ಬಾಲಿವುಡ್‌ನ ಖ್ಯಾತ ಗಾಯಕ ಅಂಕಿತ್‌ ತಿವಾರಿ ಹಾಡಿದ್ದು, ಖ್ಯಾತ ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌ ಸಂಗೀತ ನೀಡಿದ್ದಾರೆ. ಕಾಲಭೈರವ ಆರ್ಟ್ಸ್ ಲಾಂಛನದಲ್ಲಿ ಮಂಜುನಾಥ್ ಕೆ. ಹಾಗೂ ರವಿಕಿರಣ್ ಎಂ. ಗೌಡ ನಿರ್ಮಿಸಿರುವ ಈ ಚಿತ್ರವನ್ನು ಶ್ರೀನಿವಾಸ್ ಚಿಕ್ಕಣ್ಣ ನಿರ್ದೇಶಿಸಿದ್ದಾರೆ.

ಈ ಹಿಂದೆ ‘6ನೇ ಮೈಲಿ’ ಚಿತ್ರವನ್ನು ನಿರ್ದೇಶಿಸಿದ್ದ, ಶ್ರೀನಿವಾಸ್ ಚಿಕ್ಕಣ್ಣ ಅವರಿಗೆ ಇದು ಎರಡನೇ ಚಿತ್ರ. ಹಾರಾರ್ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ ಹಾಗೂ ಅಕ್ಷಯ್ ಪಿ. ರಾವ್ ಸಂಕಲನ ಈ ಚಿತ್ರಕ್ಕಿದೆ. ತಿಲಕ್ ಅವರಿಗೆ ನಾಯಕಿಯಾಗಿ ಯಜ್ಞಾ ಶೆಟ್ಟಿ ಅಭಿನಯಿಸಿದ್ದಾರೆ. v

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು