ಗುರುವಾರ , ಏಪ್ರಿಲ್ 15, 2021
30 °C

ತೆಲುಗು ಬಿಗ್‌ಬಾಸ್‌ಗೆ ಹೋಗಲ್ಲ ಎಂದಿದ್ದೇಕೆ ಬಾಲಿವುಡ್‌ ನಟಿ ಶ್ರದ್ಧಾ ದಾಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಲಿವುಡ್‌ ನಟಿ ಶ್ರದ್ಧಾ ದಾಸ್‌ ಸಾಮಾಜಿಕ ಜಾಲತಾಣಗಳಲ್ಲಿ ಬೋಲ್ಡ್ ಆಗಿರುವ ಫೋಟೊಗಳನ್ನು ಹಂಚಿಕೊಳ್ಳುವುದರಲ್ಲಿ ಹಿಂದೇಟು ಹಾಕುವುದಿಲ್ಲ. ಆಕೆ ಸುನಿಲ್ ಕುಮಾರ್‌ ದೇಸಾಯಿ ನಿರ್ದೇಶಿಸಿದ ಕನ್ನಡದ ‘ಉದ್ಘರ್ಷ’ ಸಿನಿಮಾದಲ್ಲೂ ನಟಿಸಿದ್ದರು. ಇತ್ತೀಚೆಗೆ ಆಕೆ ಟಾಲಿವುಡ್‌ ಸಿನಿಮಾಗಳಲ್ಲಿ ನಟಿಸಿದ್ದು ಕಡಿಮೆ. ಈ ನಡುವೆಯೇ ಶ್ರದ್ಧಾ ತೆಲುಗಿನ ಬಿಗ್‌ಬಾಸ್‌ ಸೀಸನ್‌– 4 ರಿಯಾಲಿಟಿ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು.

ಕಾರ್ಯಕ್ರಮದ ನಿರ್ಮಾಪಕರು ಆಕೆಯೊಟ್ಟಿಗೆ ಈ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗಿತ್ತು. ಆದರೆ, ಈ ಸುದ್ದಿಯನ್ನು ಆಕೆ ನಿರಾಕರಿಸಿದ್ದಾರೆ. ಜೊತೆಗೆ, ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುತ್ತೇನೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

‘ತೆಲುಗಿನ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗುವಂತೆ ನನ್ನನ್ನು ಯಾರೊಬ್ಬರೂ ಸಂಪರ್ಕಿಸಿಲ್ಲ. ಅದರ ಭಾಗವಾಗಲು ನನಗೆ ಇಷ್ಟವೂ ಇಲ್ಲ’ ಎಂದಿದ್ದಾರೆ ಶ್ರದ್ಧಾ.

ಬಿಗ್‌ಬಾಸ್‌ ಸೀಸನ್‌ನಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹಲವು ನಟ, ನಟಿಯರು ಹೆಸರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ, ಅಧಿಕೃತ ಪಟ್ಟಿ ಇನ್ನೂ ಹೊರಬಿದ್ದಿಲ್ಲ. ನಟ ನಾಗಾರ್ಜುನ್‌ ಈ ಬಾರಿಯ ಬಿಗ್‌ಬಾಸ್‌ ರಿಯಾಲಿಟಿ ಶೋನ ನಿರೂಪಣೆ ಮಾಡುವ ನಿರೀಕ್ಷೆಯಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು