ಹೈದರಾಬಾದ್: ತೆಲುಗು ಪವರ್‌ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಪೌರಾಣಿಕ ಕಥೆ ಆಧಾರಿತ ‘ಹರಿ ಹರ ವೀರ ಮಲ್ಲು’ ಸಿನಿಮಾ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ.

ಕ್ರಿಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರ ನಿರ್ಮಾಣ ಹಂತದಲ್ಲಿದೆ. ಪವನ್ ಕಲ್ಯಾಣ್ ಸಾಹಸ ದೃಶ್ಯಗಳ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.

ಚಿತ್ರೀಕರಣದಲ್ಲಿ ತೊಡಗಿರುವ ಪವನ್ ಕಲ್ಯಾಣ್ ಅವರ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಓದಿ...ಚೆನ್ನೈನಲ್ಲಿ ಕನ್ನಡದಲ್ಲೇ ಕೆಜಿಎಫ್ ಸಿನಿಮಾ ವೀಕ್ಷಿಸಿದ ರಜನಿಕಾಂತ್: ಹೇಳಿದ್ದೇನು?

ಈ ಚಿತ್ರದಲ್ಲಿ ಪವನ್ ಕಲ್ಯಾಣ ಹೊಸ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದು, ಮೂರು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ ಎಂದು ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

ತಮ್ಮ ಪಾತ್ರಕ್ಕಾಗಿ ಪವನ್ ಕಲ್ಯಾಣ ಮಾರ್ಷಲ್ ಆರ್ಟ್ಸ್‌ನಲ್ಲಿ ತರಬೇತಿ ಪಡೆದಿದ್ದಾರೆ.

ಚಿತ್ರದಲ್ಲಿ ಪವನ್ ಕಲ್ಯಾಣ್‌ಗೆ ನಿಧಿ ಅಗರ್ವಾಲ್ ನಾಯಕಿಯಾಗಿ ನಟಿಸಲಿದ್ದಾರೆ. ಅರ್ಜುನ್ ರಾಮ್‌ಪಾಲ್, ನರ್ಗಿಸ್ ಫಕ್ರಿ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇತ್ತೀಚೆಗೆ ತೆರೆಕಂಡಿದ್ದ ಪವನ್ ಅಭಿನಯದ ‘ಭೀಮ್ಲಾ ನಾಯಕ್’ ಚಿತ್ರಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಜತೆಗೆ ಗಲ್ಲಾಪೆಟ್ಟಿಗೆಯಲ್ಲೂ ಸದ್ದು ಮಾಡಿತ್ತು.

ಓದಿ...IPL | ಭಾರತ ತಂಡಕ್ಕೆ ಮರಳಲು ಎಲ್ಲ ಪ್ರಯತ್ನ ಮಾಡುತ್ತಿದ್ದೇನೆ: ದಿನೇಶ್ ಕಾರ್ತಿಕ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.