ಭಾನುವಾರ, ಮಾರ್ಚ್ 26, 2023
24 °C

ದೀಪಾವಳಿ ಸಂಭ್ರಮ: ತೆಲುಗು ನಟ ರಾಮ್‌ ಚರಣ್, ಅಲ್ಲು ಅರ್ಜುನ್‌ ಮನೆಯಲ್ಲಿ ಸಡಗರ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಟಾಲಿವುಡ್‌ ನಟರಾದ ರಾಮ್‌ ಚರಣ್‌ ಮತ್ತು ಅಲ್ಲು ಅರ್ಜುನ್‌ ಅವರು ಕುಟುಂಬಸ್ಥರೊಂದಿಗೆ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ.

ಸೋದರ ಸಂಬಂಧಿಗಳಾದ ರಾಮ್ ಚರಣ್ ಮತ್ತು ಅಲ್ಲು ಅರ್ಜುನ್ ಅವರು ತಮ್ಮ ಮನೆಯವರೊಂದಿಗೆ ದೀಪಾವಳಿ ಹಬ್ಬವನ್ನು ಒಟ್ಟಿಗೆ ಆಚರಿಸಿಕೊಂಡಿದ್ದು, ಇದೀಗ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿವೆ.

ರಾಮ್ ಚರಣ್ ಅವರು ಪತ್ನಿ ಉಪಸನಾ ಕೊನಿಡೆಲಾ ಜೊತೆಗಿದ್ದರು. ಅಲ್ಲು ಅರ್ಜುನ್ ಅವರು ಪತ್ನಿ ಸ್ನೇಹಾ ದಂಪತಿ ಹಾಗೂ ಇತ್ತೀಚೆಗೆ ಮದುವೆಯಾದ ನಿಹಾರಿಕಾ ಕೊನಿಡೆಲಾ ಪತಿ ಚೈತನ್ಯ ಅವರೊಂದಿಗೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಪುಷ್ಪಾ’ ಡಿ.17 ರಂದು ದೇಶದಾದ್ಯಂತ ಬಿಡುಗಡೆಯಾಗಲಿದೆ. ಆಗಸ್ಟ್‌ 13 ಕ್ಕೆ ಬಿಡುಗಡೆಯಾಗಬೇಕಿದ್ದ ಪುಷ್ಪ ಕೋವಿಡ್ ಕಾರಣದಿಂದ ಒಂದು ಬಾರಿ ಮುಂದೂಡಲಾಗಿತ್ತು.

ಆಂಧ್ರಪ್ರದೇಶದ ರಕ್ತಚಂದನ ಚೋರರ ಕಥೆ ಹೊಂದಿರುವ ‘ಪುಷ್ಪ’ದಲ್ಲಿ ಅಲ್ಲು ಅರ್ಜುನ್ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇವರಿಗೆ ಜೊತೆಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಅಲ್ಲದೇ ಡಾಲಿ ಧನಂಜಯ್, ಫಹಾದ್ ಫಾಸಿಲ್, ಜಗಪತಿ ಬಾಬು, ವೆನಿಲಾ ಕಿಶೋರ್ ತಾರಾಗಣದಲ್ಲಿದ್ದಾರೆ.

2022 ರ ಜನವರಿ 7 ರಂದು ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌‘ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಾಮ್‌ ಚರಣ್ ಅಲ್ಲೂರಿ ಸೀತಾರಾಮರಾಜು ಪಾತ್ರದಲ್ಲಿ, ಜೂನಿಯರ್ ಎನ್‌ಟಿಆರ್ ಕೋಮರಂ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ನಟರಾದ ಅಜಯ್ ದೇವ್‌ಗನ್ ಮತ್ತು ಆಲಿಯಾ ಭಟ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ... ರಾಜಣ್ಣನ ಕಾಲದಲ್ಲಿದ್ದ ಒಗ್ಗಟ್ಟು ಮತ್ತೆ ಬರೋದಿಲ್ಲವೆಂಬ ಕೊರಗು ಇತ್ತು: ಜಗ್ಗೇಶ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು