ಸೋಮವಾರ, ಜನವರಿ 17, 2022
20 °C

ನಟ ಮಹೇಶ್ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಬಿಡುಗಡೆ ಮತ್ತೆ ಮುಂದೂಡಿಕೆ?

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಹೈದರಾಬಾದ್: ತೆಲುಗು ನಟ ಮಹೇಶ್‌ ಬಾಬು ಅಭಿನಯದ ಬಹುನಿರೀಕ್ಷಿತ ಚಿತ್ರ ‘ಸರ್ಕಾರು ವಾರಿ ಪಾಟ’ ಬಿಡುಗಡೆ ದಿನಾಂಕವನ್ನು ಮತ್ತೆ ಮುಂದೂಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಈಗಾಗಲೇ ದೊಡ್ಡ ಬಜೆಟ್‌ ಚಿತ್ರಗಳಾದ ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ಪ್ಯಾನ್‌ ಇಂಡಿಯಾ ಸಿನಿಮಾ ಆರ್‌ಆರ್‌ಆರ್‌(ರೌದ್ರ–ರಣ–ರುಧಿರ), ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಚಿತ್ರಗಳನ್ನು ಮುಂದೂಡಲಾಗಿದೆ.

‘ಕೆಜಿಎಫ್-2’, ‘ಲಾಲ್ ಸಿಂಗ್ ಚಡ್ಡಾ’, ‘ಎಫ್ 3’ ಸೇರಿದಂತೆ ಬಹುನಿರೀಕ್ಷಿತ ಚಿತ್ರಗಳು ಈಗಾಗಲೇ ಬಿಡುಗಡೆ ದಿನಾಂಕವನ್ನು ಘೋಷಿಸಿವೆ.

‘ಸರ್ಕಾರು ವಾರಿ ಪಾಟ’ ಚಿತ್ರವನ್ನು ಜ.13ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಬಳಿಕ ದಿನಾಂಕವನ್ನು ಏ.1ಕ್ಕೆ ಮುಂದೂಡಿಕೆ ಮಾಡಿತ್ತು. ಆದರೆ, ಇದೀಗ ಬಂದ ಮಾಹಿತಿ ಪ್ರಕಾರ, ಚಿತ್ರದ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆ ಆಗುವ ಸಾಧ್ಯತೆ ಇದೆ’ ಎಂದು ತಿಳಿದುಬಂದಿದೆ.

ಇದನ್ನೂ ಓದಿ... ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ಮೌನ ಮುರಿದ ನಾಗ ಚೈತನ್ಯ: ಹೇಳಿದ್ದೇನು ಗೊತ್ತಾ?

ದೇಶದಾದ್ಯಂತ ಕೋವಿಡ್‌ ಹಾಗೂ ಕೊರೊನಾ ವೈರಸ್‌ ರೂಪಾಂತರಿ ತಳಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಹೇರಲಾಗಿದೆ.

ಇತ್ತೀಚೆಗೆ ಮಹೇಶ್‌ ಬಾಬು (46) ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದು, ಸೂಕ್ತ ವೈದ್ಯಕೀಯ ಸಲಹೆಗಳನ್ನು ಪಡೆಯುತ್ತಿರುವುದಾಗಿ ಅವರು ತಿಳಿಸಿದ್ದರು.

ಇದರ ನಡುವೆ ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಬಾಬು ಅವರ ಸಹೋದರ ಘಟ್ಟಮನೇನಿ ರಮೇಶ್ ಬಾಬು (56) ನಿಧನರಾದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು