ಸೋಮವಾರ, ಮೇ 23, 2022
27 °C

ನಟ ಮಹೇಶ್ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರ ಬಿಡುಗಡೆ ಮತ್ತೆ ಮುಂದೂಡಿಕೆ?

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಹೈದರಾಬಾದ್: ತೆಲುಗು ನಟ ಮಹೇಶ್‌ ಬಾಬು ಅಭಿನಯದ ಬಹುನಿರೀಕ್ಷಿತ ಚಿತ್ರ ‘ಸರ್ಕಾರು ವಾರಿ ಪಾಟ’ ಬಿಡುಗಡೆ ದಿನಾಂಕವನ್ನು ಮತ್ತೆ ಮುಂದೂಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

‘ಸರ್ಕಾರು ವಾರಿ ಪಾಟ’ ಚಿತ್ರವನ್ನು ಜ.13ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಕೋವಿಡ್ ಕಾರಣದಿಂದಾಗಿ ಬಿಡುಗಡೆ ದಿನಾಂಕವನ್ನು ಮೇ 12ಕ್ಕೆ ಮುಂದೂಡಿಕೆ ಮಾಡಿತ್ತು. ಆದರೆ, ಇದೀಗ ಬಂದ ಮಾಹಿತಿ ಪ್ರಕಾರ, ಚಿತ್ರದ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆ ಆಗುವ ಸಾಧ್ಯತೆ ಇದೆ’ ಎಂದು ತಿಳಿದುಬಂದಿದೆ.

ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಮಹೇಶ್ ಬಾಬು ಅಭಿನಯದ 'ಸರ್ಕಾರು ವಾರಿ ಪಾಟ' ಕೂಡ ಒಂದಾಗಿದೆ. 

2021ರ ವರ್ಷಾಂತ್ಯದಲ್ಲಿ ಮಹೇಶ್‌ ಬಾಬು (46) ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಇದರ ನಡುವೆ ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಬಾಬು ಅವರ ಸಹೋದರ ಘಟ್ಟಮನೇನಿ ರಮೇಶ್ ಬಾಬು (56) ನಿಧನರಾಗಿದ್ದರು. 

ಈ ಎಲ್ಲಾ ಕಾರಣಗಳಿಂದಾಗಿ ಚಿತ್ರದ ಚಿತ್ರೀಕರಣವು ಕೆಲದಿನಗಳ ಕಾಲ ತಡವಾಗಿತ್ತು. ಸದ್ಯ ಎರಡೂ ಹಂತದ ಶೂಟಿಂಗ್‌ ಮುಕ್ತಾಯವಾಗಿದ್ದು ,ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾಕ್ಕೆ ಗೀತಾ ಗೋವಿಂದಂ ಖ್ಯಾತಿಯ ಪರಶುರಾಮ್‌ ಅವರ ಚಿತ್ರಕಥೆ, ನಿರ್ದೇಶನವಿದೆ. ಈ ಸಿನಿಮಾವನ್ನು ಮೈತ್ರಿ ಮೂಮಿ ಮೇಕರ್ಸ್‌ನವರು ನಿರ್ಮಾಣ ಮಾಡುತ್ತಿದ್ದಾರೆ. ಎಸ್ಎಸ್ ತಮನ್ ಸಂಗೀತ ನಿರ್ದೇಶನವಿದೆ. ಮಹೇಶ್‌ ಬಾಬುಗೆ ಜೋಡಿಯಾಗಿ ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್‌ ನಟಿಸುತ್ತಿದ್ದಾರೆ.

ಇವನ್ನೂ ಓದಿ... 

ಕುವೈತ್‌ನಲ್ಲಿ ತಮಿಳು ನಟ ವಿಜಯ್​ ಅಭಿನಯದ ‘ಬೀಸ್ಟ್’ ಸಿನಿಮಾ ನಿಷೇಧ: ವರದಿ 

‘ಆಚಾರ್ & ಕೋ’ ಸಿನಿಮಾದ ಬಗ್ಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಹೇಳಿದ್ದೇನು?

‘ಮಜಿಲಿ’ ಸಿನಿಮಾಗೆ 3 ವರ್ಷ: ನಾಗ ಚೈತನ್ಯ ಜತೆ ನಟಿಸಿದ್ದ ಸಮಂತಾ ಹೇಳಿದ್ದೇನು? 

ಗೋವಾದಲ್ಲಿ ಸಬಾ ಜತೆ ಹೃತಿಕ್ ರೋಷನ್ ಪಾರ್ಟಿ: ಮಾಜಿ ಪತ್ನಿ ಸುಸಾನೆ ಖಾನ್ ಹಾಜರು?

ಮತ್ತೊಂದು ಹಾಟ್ ಫೋಟೊ ವೈರಲ್‌: ತಾವೇ ಸ್ವತಃ ಮೇಕಪ್‌ ಮಾಡಿಕೊಂಡ ದಿಶಾ ಪಟಾನಿ! 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು