ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋತಾಪುರಿ -2 ಚಿತ್ರ ತೆರೆಗೆ

Published 29 ಸೆಪ್ಟೆಂಬರ್ 2023, 0:05 IST
Last Updated 29 ಸೆಪ್ಟೆಂಬರ್ 2023, 0:05 IST
ಅಕ್ಷರ ಗಾತ್ರ

ಜಗ್ಗೇಶ್‌, ಡಾಲಿ ಧನಂಜಯ, ಅದಿತಿ ಪ್ರಭುದೇವ ಅಭಿನಯದ ‘ತೋತಾಪುರಿ -2’ ಚಿತ್ರ ಇಂದು (ಸೆ.28) ತೆರೆಕಂಡಿದೆ.
ಕಳೆದ ವರ್ಷ ತೆರೆಕಂಡಿದ್ದ, ನವರಸನಾಯಕ ಜಗ್ಗೇಶ್–ಅದಿತಿ ಪ್ರಭುದೇವ ಅಭಿನಯದ ‘ತೋತಾಪುರಿ’ ಚಿತ್ರದ ಮುಂದಿನ ಭಾಗ ಇದಾಗಿದ್ದು, ವಿಜಯಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರವನ್ನು ಸುರೇಶ್ ಆರ್ಟ್ಸ್, ಮೋನ್ ಫ್ಲಿಕ್ಸ್ ಸ್ಟುಡಿಯೋಸ್ ಲಾಂಚನದಲ್ಲಿ ಕೆ.ಎ. ಸುರೇಶ್ ಅವರು ಅದ್ದೂರಿಯಾಗಿ ನಿರ್ಮಿಸಿದ್ದಾರೆ. ನಿರಂಜನ ಬಾಬು ಅವರ ಛಾಯಾಗ್ರಹಣ, ಅರುಣ್ ಆಂಡ್ರ್ಯೂ ಅವರ ಸಂಗೀತ ಸಂಯೋಜನೆಯಿದೆ. ದತ್ತಣ್ಣ, ಸುಮನ ರಂಗನಾಥ್, ವೀಣಾ ಸುಂದರ್, ಹೇಮಾದತ್ ಹೀಗೆ ಮೊದಲ ಭಾಗದಲ್ಲಿದ್ದ ಬಹುತೇಕ ಪಾತ್ರಗಳು ಮುಂದುವರಿದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT