ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತೋತಾಪುರಿ-2’ ಚಿತ್ರದಲ್ಲಿ ಡಾಲಿ ಧನಂಜಯ್‌

Published 4 ಜುಲೈ 2023, 23:30 IST
Last Updated 4 ಜುಲೈ 2023, 23:30 IST
ಅಕ್ಷರ ಗಾತ್ರ

ಜಗ್ಗೇಶ್‌, ಡಾಲಿ ಧನಂಜಯ್‌ ನಟನೆಯ ‘ತೋತಾಪುರಿ–2’ ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆಗೊಂಡಿದೆ. ‘ತೋತಾಪುರಿ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಧನಂಜಯ್‌, ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕರಾಗಿರುತ್ತಾರೆ. 

‘ಜಗತ್ತೇ ಒಂದು ಮನೆ, ನಾವೆಲ್ಲ ಒಂದೇ ಸೂರಿನಡಿ ಬದುಕುತ್ತಿರುವವರು ಎನ್ನುವ ಭಾವೈಕ್ಯತೆಯ ಸಂದೇಶ ಸಾರುವ ಚಿತ್ರದ ಎರಡನೇ ಭಾಗವೇ ನಿಜವಾದ ಸಿನಿಮಾ’ ಎಂದು ನಟ ಜಗ್ಗೇಶ್‌ ಈ ಹಿಂದೆ ಹೇಳಿದ್ದರು.

ವಿಜಯಪ್ರಸಾದ್ ನಿರ್ದೇಶನದ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್, ಅದಿತಿ ಪ್ರಭುದೇವ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶಿವಲಿಂಗ ಖ್ಯಾತಿಯ ನಿರ್ಮಾಪಕ ಕೆ.ಎ.ಸುರೇಶ್ ಬಂಡವಾಳ ಹೂಡಿದ್ದಾರೆ.

‘ಮೊದಲ ಭಾಗಕ್ಕಿಂತ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಡಾಲಿ ಅಭಿಮಾನಿಗಳಿಗಂತೂ ಹಬ್ಬ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಿಸುತ್ತೇವೆ’ ಎಂದು ಚಿತ್ರದ ನಿರ್ಮಾಪಕ ಕೆ.ಎ.ಸುರೇಶ್ ಹೇಳಿದ್ದಾರೆ.

ದತ್ತಣ್ಣ, ಸುಮನ ರಂಗನಾಥ್, ಅದಿತಿ ಪ್ರಭುದೇವ, ವೀಣಾ ಸುಂದರ್ ಮೊದಲಾದವರು ಚಿತ್ರದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT