ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಕಲ್ಜಿಗ’ ಚಿತ್ರದ ಟ್ರೇಲರ್‌ ಬಿಡುಗಡೆ

Published 21 ಆಗಸ್ಟ್ 2024, 23:06 IST
Last Updated 21 ಆಗಸ್ಟ್ 2024, 23:06 IST
ಅಕ್ಷರ ಗಾತ್ರ

ಕರಾವಳಿ ಭಾಗದ ಕಥೆ ಹೊಂದಿರುವ ‘ಕಲ್ಜಿಗ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಅರ್ಜುನ್ ಕಾಪಿಕಾಡ್ ಮತ್ತು ಸುಶ್ಮಿತಾ ಭಟ್ ಜೋಡಿಯಾಗಿ ನಟಿಸಿರುವ ಚಿತ್ರಕ್ಕೆ ಸುಮನ್ ಸುವರ್ಣ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್ ಸೇರಿದಂತೆ ಅನೇಕ ಗಣ್ಯರು ಟ್ರೇಲರ್‌ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

‘ಸಿನಿಮಾಕ್ಕೆ ಸಂಬಂಧಿಸಿದ ಎಲ್ಲಾ ಕೆಲಸಗಳು ಪೂರ್ಣಗೊಂಡಿದ್ದು, ಸೆಪ್ಟೆಂಬರ್ 13 ರಂದು ಬಿಡುಗಡೆಗೊಳ್ಳಲಿದೆ. ರಾಜ್ಯದಲ್ಲಿ ಮಾತ್ರವಲ್ಲದೇ ಮುಂಬೈ, ಕೊಲ್ಲಿ ರಾಷ್ಟ್ರಗಳಲ್ಲಿಯೂ ಬಿಡುಗಡೆ ಮಾಡುವ ಯೋಚನೆಯಿದೆ. ಕರಾವಳಿಯ ಸಂಸ್ಕೃತಿ, ಆಚರಣೆಗಳ ಜೊತೆಗೆ ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ನಂತರದಲ್ಲಿ ಘಟಿಸುವ ಕಥೆ ಚಿತ್ರದಲ್ಲಿದೆ’ ಎಂದರು ನಿರ್ದೇಶನ ಸುಮನ್‌. 

ಶರತ್ ಕುಮಾರ್ ಎ.ಕೆ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹಂಸಲೇಖ ಸಂಗೀತ, ಸಾಹಿತ್ಯ, ಸಚಿನ್ ಶೆಟ್ಟಿ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ಮಾನಸಿ ಸುಧೀರ್‌, ಶೋಭರಾಜ್‌ ಪಾವೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT