ಜಿಮ್‌ನಲ್ಲಿ ವರ್ಕೌಟ್: ಸಮಂತಾ ಫಿಟ್ನೆಸ್‌ಗೆ ಅಭಿಮಾನಿಗಳು ಫಿದಾ, ವಿಡಿಯೊ ನೋಡಿ

ಹೈದರಾಬಾದ್: ತೆಲುಗು ನಟ ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸಮಂತಾ, ದೇಹದಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಫಿಟ್ನೆಸ್‌ಗೆ ಹೆಚ್ಚು ಒತ್ತು ನೀಡುವ ಸಮಂತಾ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೊವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿರುವ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಮಂತಾ ಅತ್ಯಂತ ಸುಲಭವಾಗಿ ತೂಕವನ್ನು ಎತ್ತುವುದನ್ನು ಕಾಣಬಹುದು. 75, 78, 80 ಕೆ.ಜಿ ತೂಕ ಎತ್ತುತ್ತಿರುವ ವಿಡಿಯೊವನ್ನು ಪೋಸ್ಟ್ ಮಾಡಿದ್ದರು.
ಓದಿ... ನಟಿ ಅಮೂಲ್ಯ ಬೇಬಿ ಬಂಪ್ ಫೋಟೊ ವೈರಲ್, ಅಭಿಮಾನಿಗಳಿಂದ ಮೆಚ್ಚುಗೆ
ಇತ್ತೀಚೆಗೆ ತೆರೆಕಂಡ ಸುಕುಮಾರ್ ನಿರ್ದೇಶನದ ‘ಪುಷ್ಪ’ ಸಿನಿಮಾದಲ್ಲಿ ಸಮಂತಾ, ಮೊದಲ ಬಾರಿಗೆ ಐಟಂ ಸಾಂಗ್‌ನಲ್ಲಿ ಕಾಣಿಸಿಕೊಂಡಿದ್ದು, ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
‘ಹೂ ಅಂತಿಯಾ ಮಾವ.. ಊ ಊ ಅಂತಿಯಾ’ ಹಾಡಿಗೆ ಸಮಂತಾ ಮೈ ಚಳಿ ಬಿಟ್ಟು ಸೊಂಟ ಬಳುಕಿಸಿದ್ದಾರೆ. ಸಿನಿಮಾ ಗೆಲುವಿನಲ್ಲಿ ಈ ವಿಶೇಷ ಹಾಡು ಪ್ರಮುಖ ಪಾತ್ರ ವಹಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ.
ಫಿಲಿಪ್ ಜಾನ್ ನಿರ್ದೇಶನದ ‘ಅರೆಂಜ್‌ಮೆಂಟ್ಸ್ ಆಫ್ ಲವ್’ ಎಂಬ ಹಾಲಿವುಡ್ ಚಿತ್ರದಲ್ಲಿ ಸಮಂತಾ ಅಭಿನಯಿಸಲಿದ್ದಾರೆ.
ಸಮಂತಾ ಹಾಗೂ ನಾಗ ಚೈತನ್ಯ ಅವರು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ವಿಚ್ಛೇದನ ಪಡೆಯುತ್ತಿರುವುದಾಗಿ ಘೋಷಿಸಿದ್ದರು.
ಓದಿ... ಸಮಂತಾ ಜೊತೆಗಿನ ವಿಚ್ಛೇದನದ ಬಗ್ಗೆ ಮೌನ ಮುರಿದ ನಾಗ ಚೈತನ್ಯ: ಹೇಳಿದ್ದೇನು ಗೊತ್ತಾ?
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.