ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜಿಎಫ್ ಶೂಟಿಂಗ್ ನಡೆದ ಬರಡು ಭೂಮಿಗೆ ಮತ್ತೆ ಜೀವ ನೀಡಿದ ಹೊಂಬಾಳೆ ಫಿಲಂಸ್

Last Updated 28 ಅಕ್ಟೋಬರ್ 2021, 12:03 IST
ಅಕ್ಷರ ಗಾತ್ರ

ಬೆಂಗಳೂರು: ಕೆಜಿಎಫ್ -2 ಸಿನಿಮಾ ಚಿತ್ರೀಕರಣ ನಡೆದ ಕೋಲಾರ ಜಿಲ್ಲೆಯ ಕೆಜಿಎಫ್‌ ನಗರದ ಸೈನೈಡ್ ಗುಡ್ಡದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದೆ.

ಯುಟ್ಯೂಬ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಹೊಂಬಾಳೆ ಫಿಲಂಸ್ ಸಂಸ್ಥೆ, ‘ಅರಣ್ಯ ಇಲಾಖೆ ಜೊತೆಗೂಡಿ ಸಾವಿರಾರು ಗಿಡಗಳನ್ನು ನೆಡುವ ಮೂಲಕ ಈ ಬಂಜರು ಭೂಮಿಗೆ ಮತ್ತೆ ಮರುಜೀವ ನೀಡಲಾಗುತ್ತಿದೆ. ಸೈನೈಡ್‌ ಗುಡ್ಡದಲ್ಲಿ ಅರಣ್ಯ ಬೆಳೆಸುವ ಮೂಲಕ ಸ್ಥಳೀಯ ನಿವಾಸಿಗಳಿಗೆ ಸ್ವಚ್ಛ ಪರಿಸರದ ಕೊಡುಗೆ ನೀಡುವ ಪ್ರಯತ್ನ ಮಾಡುತ್ತಿರುವುದಾಗಿ’ ಹೇಳಿಕೊಂಡಿದೆ.

ಸದ್ಯ ವಿಡಿಯೊ ನೋಡಿರುವ ಯಶ್‌ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್‌ ಚಿತ್ರ ಕನ್ನಡ, ತೆಲುಗು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತ್ತು. ಸದ್ಯ ಬಿಡುಗಡೆಗೆ ಸಿದ್ಧವಾಗಿರುವ ಕೆಜಿಎಫ್ ಚಾಪ್ಟರ್-2 ಚಿತ್ರವೂ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.

ಚಿತ್ರದಲ್ಲಿ ನಟ ಯಶ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಚಿತ್ರವನ್ನು 2022ರ ಏಪ್ರಿಲ್ 14 ರಂದು ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT