ದಿಲೀಪ್ ಕುಮಾರ್ ಜೆ.ಆರ್ ನಿರ್ದೇಶನದ ‘ತ್ರಿಕಾರಂ’ ಎಂಬ ಸಿನಿಮಾದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ.

ಸಿನಿಮಾದಲ್ಲಿ ಹರ್ಷವರ್ಧನ್ ನಾಯಕರಾಗಿ ನಟಿಸಿದ್ದು, ನಿಶ್ವಿತ ಶೆಟ್ಟಿ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ. ‘ಆ ದೇವರ ವಂಶದ ಕುಡಿ ಇವನು, ಈ ಮಣ್ಣನು ಕಾಯಲು ಬಂದವನು’ ಎಂಬ ಹಾಡಿಗೆ ನಿರ್ದೇಶಕ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದು, ಶಶಾಂಕ್ ಶೇಷಗಿರಿ ದನಿಯಾಗಿದ್ದಾರೆ. ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶಿಸಿದ್ದಾರೆ.

ಜಿ. ಗಣೇಶ್ ಮೂರ್ತಿ ಅವರು ಸದ್ಗುರು ಸಿನಿ ಪ್ರೊಡಕ್ಷನ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡಿದ್ದು, ಜೊತೆಗೆ ಖಳನಾಯಕನ ಪಾತ್ರವನ್ನು ನಿಭಾಯಿಸಿದ್ದಾರೆ. ನಾಗೇಂದ್ರ ಅರಸು, ಬಲ ರಾಜವಾಡಿ, ಮಂಜು ಪಾವಗಡ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹೊನ್ನಾಳಿ ಯಾಸಿನ್ ಛಾಯಾಚಿತ್ರಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಚಿತ್ರದುರ್ಗ, ಚಿಕ್ಕಮಗಳೂರು, ಮಾರಿಕಣಿವೆ, ಸಾಣೆಹಳ್ಳಿ, ದಾವಣಗೆರೆ, ಮೈಸೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ. ಶೀಘ್ರದಲ್ಲೇ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.