ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ್ದಾರೆ. ಅದರ ಬೆನ್ನಲೇ ಅವರ ಆಪ್ತ ಸ್ನೇಹಿತೆಯಾಗಿರುವ ನಟಿ ತ್ರಿಶಾ ಕೃಷ್ಣನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರೀತಿ ಕುರಿತು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಅವರು ತಿಳಿ ನೀಲಿ ಬಣ್ಣದ ಸೀರೆ ಧರಿಸಿ ಸಾಂಪ್ರದಾಯಿಕ ಲುಕ್ನಲ್ಲಿ ಗಮನ ಸೆಳೆದಿದ್ದರು. ಆ ವೇಳೆ ಕ್ಲಿಕ್ಕಿಸಿಕೊಂಡ ಚಿತ್ರಗಳನ್ನು ಹಂಚಿಕೊಂಡಿರುವ ಅವರು, ʼಪ್ರೀತಿ ಎಲ್ಲಕ್ಕಿಂತಲೂ ಶಕ್ತಿಶಾಲಿʼ (The love is always louder) ಎಂದಿದ್ದಾರೆ.

ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಜೋಸೆಫ್ ವಿಜಯ್ ಅವರು ಪ್ರಮಾಣ ವಚನ ಸ್ವೀಕರಿಸುವಾಗ ತ್ರಿಶಾ ಕೃಷ್ಣನ್ ಅವರು ತಮ್ಮ ಕುಟುಂಬದ ಜೊತೆ ಆಗಮಿಸಿದ್ದರು.

ವಿಜಯ್ಗೆ ಶುಭಕೋರಿದ್ದ ತ್ರಿಶಾ, ʼಈ ಕ್ಷಣ ತುಂಬಾ ಹೆಮ್ಮೆ ಎನಿಸುತ್ತಿದೆ. ವಿಜಯ್ ಅವರಿಗೆ ಬೆಂಬಲಿಸಿದ ತಮಿಳುನಾಡಿನ ಜನತೆಗೂ ಅಭಿನಂದನೆ ಸಲ್ಲಿಸುತ್ತೇನೆʼ ಎಂದಿದ್ದರು.

ವಿಜಯ್ ಹಾಗೂ ತ್ರಿಶಾ ಅವರು ʼಗಿಲ್ಲಿʼ, ʼತಿರುಪಾಚಿʼ, ʼಆತಿʼ, ʼಕುರುವಿʼ , ʼಲಿಯೋʼ ಚಿತ್ರಗಳಲ್ಲಿ ಒಟ್ಟಿಗೆ ನಟಿಸಿ ತಮಿಳು ಚಿತ್ರರಂಗದಲ್ಲಿ ಪ್ರಸಿದ್ಧಿ ಪಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.