ಕೃಷ್ಣ ಸುಂದರಿ ತ್ರಿಶಾ ಜನ್ಮದಿನ: ಸೌತ್ ಕ್ವೀನ್ ಬೆಡಗಿಗೆ 37ರ ಸಂಭ್ರಮ...

ಬೆಂಗಳೂರು: ತ್ರಿಶಾ ಕೃಷ್ಣನ್ ಇಂದು (ಮೇ 4) 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.
Happy Bday @trishtrashers.. fav💖#HappyBirthdayTrisha #HBDSouthQueenTrisha
A small edit from my side🤗 pic.twitter.com/oE90RPf0uT— Kiran M (@KiranM11427178) May 3, 2020
ತ್ರಿಶಾ, ಪುನೀತ್ ರಾಜ್‌ಕುಮಾರ್ ಜೊತೆ ’ಪವರ್ ಸ್ಟಾರ್’ ಸಿನಿಮಾದಲ್ಲಿ ನಟಿಸಿದ್ದರು. ಅವರಿಗೆ ಸ್ಯಾಂಡಲ್‌ವುಡ್‌ನಲ್ಲೂ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ.
ತ್ರಿಶಾ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು ಎರಡು ದಶಕಗಳು ಕಳೆದರೂ ಈಗಲೂ ಅದೇ ಚಾರ್ಮ್ ಉಳಿಸಿಕೊಂಡು ಬೇಡಿಕೆಯ ನಟಿಯಾಗಿದ್ದಾರೆ. ತೆಲುಗು, ತಮಿಳು, ಕನ್ನಡದಲ್ಲಿ ನಟಿಸಿರುವ ತ್ರಿಶಾ ಬಾಲಿವುಡ್‌ನಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.
ತ್ರಿಶಾಗೆ ಅಭಿಮಾನಿಗಳು ಸೇರಿದಂತೆ ಸಿನಿಮಾರಂಗದ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಜನ್ಮದಿನದ ಶುಭಾಶಯಗಳನ್ನು ಕೋರುತ್ತಿದ್ದಾರೆ.
ತ್ರಿಶಾ ಸದ್ಯ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.