ಸೋಮವಾರ, ಸೆಪ್ಟೆಂಬರ್ 16, 2019
26 °C

’ರಾಂಗಿ’ ಚಿತ್ರದಲ್ಲಿ ತ್ರಿಷಾ

Published:
Updated:
Prajavani

ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ ‘ಪೆಟ್ಟಾ’ ಚಿತ್ರದಲ್ಲಿ ಸಣ್ಣ ಪಾತ್ರವೊಂದರಲ್ಲಿ ತ್ರಿಷಾ ಅಭಿನಯಿಸಿದ್ದರೂ ಅವರ ನಟನೆಗೆ ಹೆಚ್ಚು ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅವರ ಕೈಯಲ್ಲಿ ಬಹಳ ಸಿನಿಮಾಗಳಿವೆ. ಸದ್ಯ ಆ್ಯಕ್ಷನ್‌ ಥ್ರಿಲ್ಲರ್‌ ‘ರಾಂಗಿ’ ಚಿತ್ರದ  ಚಿತ್ರೀಕರಣದಲ್ಲಿ ಅವರು ಬ್ಯುಸಿಯಾಗಿದ್ದಾರೆ. 

ಇದರಲ್ಲಿನ ಆ್ಯಕ್ಷನ್‌ ದೃಶ್ಯಗಳ ಚಿತ್ರೀಕರಣವು ಸೆಪ್ಟೆಂಬರ್‌ ತಿಂಗಳಲ್ಲಿ ಉಜ್ಬೇಕಿಸ್ತಾನದಲ್ಲಿ ನಡೆಯಲಿದೆ. ಈ ಚಿತ್ರವನ್ನು ಎಂ. ಶರವಣನ್‌ ನಿರ್ದೇಶಿಸುತ್ತಿದ್ದು, ತ್ರಿಷಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಚಿತ್ರದ ಪೋಸ್ಟರ್‌ವೊಂದನ್ನು ಚಿತ್ರತಂಡ ಹಂಚಿಕೊಂಡಿತ್ತು. ಅದರಲ್ಲಿ ತ್ರಿಷಾ ಕೈಯಲ್ಲಿ ಗನ್‌ ಹಿಡಿದುಕೊಂಡಿದ್ದು, ಚಿತ್ರದ ಕತೆ ಬಗ್ಗೆ ಕುತೂಹಲ ಕೆರಳಿಸಿದೆ. 

ಈ ಚಿತ್ರಕ್ಕಾಗಿ ತ್ರಿಷಾ ಬುಲೆಟ್‌ ಓಡಿಸುವುದನ್ನು ಕಲಿತುಕೊಂಡಿದ್ದಾರೆ. ಅಲ್ಲಿ 10–15 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರದ ಮೂಲಗಳು ತಿಳಿಸಿವೆ. 

ಸೆಪ್ಟೆಂಬರ್‌ ಅಂತ್ಯದಲ್ಲಿ ಈ ಚಿತ್ರದ ಟೀಸರ್‌ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ. ಚಿತ್ರವನ್ನು ಲೈಕಾ ಪ್ರೊಡಕ್ಷನ್‌ ನಿರ್ಮಾಣ ಮಾಡುತ್ತಿದೆ. 

Post Comments (+)