ಬುಧವಾರ, ಸೆಪ್ಟೆಂಬರ್ 22, 2021
27 °C

ಚಪ್ಪಲಿ ಧರಿಸಿ ’ಶಿವ’ ದೇವಾಲಯದಲ್ಲಿ ಓಡಾಟ: ನಟಿ ತ್ರಿಷಾಗೆ ಬಂಧನ ಭೀತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಹು ಭಾಷೆ ತಾರೆ ತ್ರಿಷಾ ಕೃಷ್ಣನ್‌ ಅವರಿಗೆ ಸಂಕಷ್ಟ ಎದುರಾಗಿದ್ದು ಅವರು ಬಂಧನ ಭೀತಿಯಲ್ಲಿದ್ದಾರೆ.

ಚಿತ್ರೀಕರಣದ ಸಂದರ್ಭದಲ್ಲಿ ಯಡವಟ್ಟು ಮಾಡಿಕೊಂಡಿರುವ ನಟಿಯ ವಿರುದ್ಧ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. 


ತ್ರಿಷಾ

ಮಣಿರತ್ನಂ ನಿರ್ದೇಶನದ 'ಪೊನ್ನಿಯಿನ್ ಸೆಲ್ವನ್' ಸಿನಿಮಾದಲ್ಲಿ ತ್ರಿಷಾ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದರ ಚಿತ್ರೀಕರಣ ಇತ್ತೀಚೆಗೆ ಇಂಧೋರ್‌ನ ಶಿವ ದೇವಾಲಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅವರು ಚಪ್ಪಲಿ ಹಾಕಿಕೊಂಡು ದೇವಾಲಯದಲ್ಲಿ ಓಡಾಡಿರುವುದು ವಿವಾದಕ್ಕೆ ಕಾರಣವಾಗಿದೆ. 

ತ್ರಿಷಾ, ದೇವಾಲಯದ ಗರ್ಭಗುಡಿ ಮುಂಭಾಗ ಚಪ್ಪಲಿ ಧರಿಸಿ, ಶಿವಲಿಂಗ ಹಾಗೂ ನಂದಿಯ ಮಧ್ಯೆ ನಡೆದಾಡಿದ್ದಾರೆ. ಇದರ ಚಿತ್ರಗಳ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ತ್ರಿಷಾ ಅವರು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು  ಹಿಂದೂಪರ ಸಂಘಟನೆಗಳು ಆರೋಪ ಮಾಡಿದ್ದು ಅವರ ವಿರುದ್ಧ ದೂರು ದಾಖಲಿಸಿವೆ. ಯಾವ ಸಂಘಟನೆ ದೂರು ನೀಡಿದೆ ಎಂಬುದು ವರದಿಯಾಗಿಲ್ಲ. 

ಕೆಲ ದಿನಗಳ ಹಿಂದೆ ಇದೇ ಸಿನಿಮಾದ ಚಿತ್ರೀಕರಣದ ವೇಳೆ ಕುದುರೆ ಸಾವನ್ನಪ್ಪಿತ್ತು. ಇದರ ತನಿಖೆ ಕೂಡ ಪ್ರಗತಿಯಲ್ಲಿದೆ.

ಪುನೀತ್‌ ರಾಜ್‌ಕುಮಾರ್ ಅಭಿನಯದ ’ಪವರ್’ ಸಿನಿಮಾದಲ್ಲಿ ತ್ರಿಷಾ ನಟಿಸಿದ್ದರು. ಈ ಸಿನಿಮಾ 2014ರಲ್ಲಿ ಬಿಡುಗಡೆಯಾಗಿತ್ತು. ಈಗ ಮತ್ತೆ ಪುನೀತ್‌ ನಟನೆಯ 'ದ್ವಿತ್ವ'  ಸಿನಿಮಾದಲ್ಲಿ ತ್ರಿಷಾ ನಾಯಕಿಯಾಗಿ ನಟಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು