ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ.18ರಿಂದ ‘ಅಬತರ’ ತುಳು ಸಿನಿಮಾ ಬಿಡುಗಡೆ

15 ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ ಚಿತ್ರ
Last Updated 16 ಆಗಸ್ಟ್ 2022, 15:38 IST
ಅಕ್ಷರ ಗಾತ್ರ

ಉಡುಪಿ: ಬೊಳ್ಳಿ ಮೂವೀಸ್ ಮತ್ತು ಅವಿಕ ಪ್ರೊಡಕ್ಷನ್‌ನಲ್ಲಿ ತಯಾರಾಗಿರುವ ತುಳು ಸಿನಿಮಾ ‘ಅಬತರ’ ತುಳು ಸಿನಿಮಾ ಆ.18ರಂದು ಕರಾವಳಿಯಾದ್ಯಂತ ತೆರೆ ಕಾಣಲಿದೆ ಎಂದು ನಟ, ನಿರ್ದೇಶಕ ದೇವದಾಸ್ ಕಾಪಿಕಾಡ್ ತಿಳಿಸಿದರು.

ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿತ್ರಕ್ಕೆ ಅರ್ಜುನ್ ಕಾಪಿಕಾಡ್ ನಿರ್ದೇಶನವಿದ್ದು, ಮಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಸಂಪೂರ್ಣ ಹಾಸ್ಯಮಯ ಸಿನಿಮಾ ತಯಾರಿಸಲಾಗಿದ್ದು ಸಮಾಜಕ್ಕೆ ಉತ್ತಮ ಸಂದೇಶ ನೀಡಲಾಗಿದೆ ಎಂದು ತಿಳಿಸಿದರು.

ನಟ ಅರ್ಜುನ್ ಕಾಪಿಕಾಡ್ ಮಾತನಾಡಿ, ಅಬತರ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್, ಸಿನಿಪೊಲಿಸ್, ಪಿವಿಆರ್, ಮೂಡಬಿದ್ರೆಯಲ್ಲಿ ಅಮರಶ್ರೀ, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್‌ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಉಡುಪಿಯಲ್ಲಿ ಕಲ್ಪನಾ, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಐನಾಕ್ಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಅರುಣಾ, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರದಲ್ಲಿ ತೆರೆ ಕಾಣಲಿದೆ.

ನಂತರ ಮುಂಬೈ, ಬೆಂಗಳೂರು, ಕಾಸರಗೋಡು, ಮುಳ್ಳೇರಿಯ, ಸಕಲೇಶಪುರ, ಶುಂಠಿಕೊಪ್ಪ, ತೀರ್ಥಹಳ್ಳಿ, ಕುಂದಾಪುರ, ಶಿವಮೊಗ್ಗದಲ್ಲಿ ಬಿಡುಗಡೆಗೊಳ್ಳಲಿದೆ. ಆ.16 ಮತ್ತು 17ರಂದು ಮಂಗಳೂರು, ಮೂಡಬಿದ್ರೆ, ಪುತ್ತೂರು, ಉಡುಪಿ, ಪಡುಬಿದ್ರೆ, ಕಿನ್ನಿಗೋಳಿ, ಗುರುಪುರ, ಕುಲಶೇಖರದ ಅನಾಥಶ್ರಮದಲ್ಲಿರುವ ಮಕ್ಕಳಿಗೆ ಉಚಿತವಾಗಿ ಸಿನಿಮಾ ತೋರಿಸಲಾಗುವುದು ಎಂದು ತಿಳಿಸಿದರು.

ಅಬತರ ಹಾಸ್ಯ ಸಿನಿಮಾದ ಕತೆಯನ್ನು ದೇವದಾಸ್ ಕಾಪಿಕಾಡ್ ರಚಿಸಿದ್ದು, ಅಭಿನಯಿಸಿದ್ದಾರೆ. ತುಳುನಾಡ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಅಭಿನಯದ ಜೊತೆಗೆ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ನವೀನ್ ಡಿ.ಪಡಿಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿ ಕೃಷ್ಣ, ಸನಿಲ್ ಗುರು, ಚೇತನ್ ರೈ ಮಾಣಿ, ಲಕ್ಷ್ಮೀಶ್, ಸುನಿಲ್ ಚಿತ್ರಾಪುರ ನಾಯಕ ನಟಿಯಾಗಿ ಗಾನ ಭಟ್, ಕ್ರಿಸ್ಟಿನಾ ನಟಿಸಿದ್ದಾರೆ.

ಛಾಯಾಗ್ರಾಹಕರಾಗಿ ವಿಷ್ಣು ಪ್ರಸಾದ್, ಜೇಕೋಬ್, ಕಾರ್ಯಕಾರಿ ನಿರ್ಮಾಪಕರಾಗಿ ಸಂದೀಪ್ ಶೆಟ್ಟಿ, ನಿಖಿಲ್ ಸಾಲ್ಯಾನ್ ನಿರ್ಮಾಪಕರಾಗಿದ್ದು, ವೀರಾಜ್ ಅತ್ತಾವರ ಸಹ ನಿರ್ಮಾಪಕರಾಗಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT