ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲತಾ ದೀದಿ ನಿಧನ: ಶಿವಾಜಿ ಪಾರ್ಕ್‌ನಲ್ಲಿ ಇಂದು ಸಂಜೆ ಅಂತಿಮ ಸಂಸ್ಕಾರ

Last Updated 6 ಫೆಬ್ರುವರಿ 2022, 7:37 IST
ಅಕ್ಷರ ಗಾತ್ರ

ಮುಂಬೈ: ಭಾರತದ ಗಾನ ಕೋಗಿಲೆ, ಭಾರತ ರತ್ನ ಲತಾ ಮಂಗೇಶ್ಕರ್‌ (92) ಅವರ ಗೌರವಾರ್ಥ ರಾಷ್ಟ್ರದಾದ್ಯಂತ ಎರಡು ದಿನ ಶೋಕಾಚರಣೆ ನಡೆಸಲು ಸರ್ಕಾರ ನಿರ್ಧರಿಸಿದೆ. ನಗರದ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲತಾ ಮಂಗೇಶ್ಕರ್‌ ಭಾನುವಾರ ನಿಧನರಾದರು.

ಎರಡು ದಿನ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳಿಂದ ತಿಳಿದು ಬಂದಿರುವುದಾಗಿ ಎಎನ್‌ಐ ಟ್ವೀಟಿಸಿದೆ.

ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಇಡಲಾಗಿದ್ದು, ಇಂದು ಸಂಜೆ 6:30ಕ್ಕೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನಡೆಯಲಿದೆ.

ಕೋವಿಡ್‌–19 ದೃಢಪಟ್ಟ ಕಾರಣ ಜನವರಿ 8ರಂದು ಲತಾ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಲತಾ ದೀದಿ ಅವರ ಅಗಲಿಕೆಯಿಂದ ದೇಶದಲ್ಲಿ ಶೂನ್ಯ ಆವರಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟಿಸಿದ್ದಾರೆ.

1942ರಿಂದ ಆರಂಭವಾದ ಅವರ ಗಾಯನ ಯಾನದಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT