ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ

Last Updated 22 ಡಿಸೆಂಬರ್ 2020, 11:33 IST
ಅಕ್ಷರ ಗಾತ್ರ

ಶ್ರೀ ಬಸವೇಶ್ವರ ಕ್ರಿಯೆಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ. ಕೊಟಗಿ ನಿರ್ಮಿಸಿರುವ ‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಈ ಚಿತ್ರವನ್ನು ಕೆಲ ದಿನಗಳಲ್ಲೇ ಬಿಡುಗಡೆಯಾಗಲಿದೆ. ಚಿತ್ರ ವೀಕ್ಷಣೆ ಮಾಡಿದ್ದ ಸೆನ್ಸಾರ್ ಮಂಡಳಿ ಸದಸ್ಯರು ಚಿತ್ರವನ್ನು ಹೊಗಳಿದ್ದಾರೆ.

ಈ ಚಿತ್ರ ಸಿನಿರಸಿಕರಿಗೂ ಮೆಚ್ಚುಗೆಯಾಗಲಿದೆ ಎಂಬ ಭರವಸೆ ನಿರ್ದೇಶಕ ಸಿದ್ದು ಪೂರ್ಣಚಂದ್ರ ಅವರದ್ದು.

ಇತ್ತೀಚೆಗೆ ನಟ ಧೃವ ಸರ್ಜಾ ಸಿನಿಮಾದ ಫಸ್ಟ್‌ಲುಕ್ ಬಿಡುಗಡೆ ಮಾಡಿದ್ದರು. ಅದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಹಿಂದೆ ‘ಕೃಷ್ಣ ಗಾರ್ಮೆಂಟ್ಸ್’ ಚಿತ್ರ ನಿರ್ದೇಶಿಸಿದ್ದ ಸಿದ್ದು ಪೂರ್ಣಚಂದ್ರ ಈ ಚಿತ್ರದ ನಿರ್ದೇಶಕರು. ವರ್ಧನ್ ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಅನುಷಾ, ‘ತಿಥಿ’ ಖ್ಯಾತಿಯ ಪೂಜಾ, ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅರುಣ್‌ ಮೂರ್ತಿ, ಸಂಗೀತ, ಗೌಡಿ, ಸಿದ್ಧಾರ್ಥ್, ಪ್ರಣಯ್ ಮೂರ್ತಿ, ಸ್ಪಂದನ ಪ್ರಸಾದ್, ದಯಾನಂದ್, ಸುಚಿತ್, ಮೈಸೂರು ಬಸವರಾಜ್ ಮುಂತಾದವರಿದ್ದಾರೆ.

ಲೋಕಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಿತಿನ್ ಛಾಯಾಗ್ರಹಣ ಹಾಗೂ ಮುತ್ತುರಾಜ್ ಸಂಕಲನವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT