ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಈ ಸಿನಿಮಾದ ಚಿತ್ರೀಕರಣ ಅಂತಿಮ ಹಂತಕ್ಕೆ ತಲುಪಿದ್ದು, ಇತ್ತೀಚೆಗೆ ಉಪೇಂದ್ರ ಜನ್ಮದಿನದಂದು ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಭಿನ್ನವಾದ ಲುಕ್‌ನಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದಾರೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳದಲ್ಲಿ ತೆರೆಕಾಣಲಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಚಿತ್ರಕಥೆ ಬರೆದಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ ಚಿತ್ರದ ಬಳಿಕ ರಮೇಶ್ ರೆಡ್ಡಿ ಅವರ ಸೂರಜ್ ಪ್ರೊಡಕ್ಷನ್ಸ್‌ನ ಎರಡನೇ ಸಿನಿಮಾವಿದು.